More

    ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

    ಹನೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭಾನುವಾರ ಶಾಸಕ ಎಂ.ಆರ್ ಮಂಜುನಾಥ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

    ಸಂಘದ ಅಧ್ಯಕ್ಷ ಎಂ. ಗುರುಸ್ವಾಮಿ ಮಾತನಾಡಿ, ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6ನೇ ವೇತನ ಆಯೋಗವನ್ನು ರಚಿಸಿ, ವರದಿಯನ್ನು ಪಡೆದು ಸರ್ಕಾರಿ ನೌಕರರಿಗೆ ಅನುಕೂಲ ಕಲ್ಪಿಸಿದ್ದರು. ಆದರೆ 7ನೇ ವೇತನ ಆಯೋಗವನ್ನು 2 ಬಾರಿ ವಿಸ್ತರಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ವರದಿಯನ್ನು ಮಂಡಿಸಿಲ್ಲ. ಜತೆಗೆ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧವೂ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ಇದರಿಂದ ರಾಜ್ಯದ ಸುಮಾರು 3 ಲಕ್ಷ ನೌಕರರಲ್ಲಿ ಆತಂಕವನ್ನು ಉಂಟುಮಾಡಿದೆ. ಇನ್ನು ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬದ ಸದಸ್ಯರಿಗೆ ಮಾಸಿಕ ವಂತಿಗೆ ನೀಡುವ ಮೂಲಕ ಸರ್ಕಾರ ನಗದು ರಹಿತ ಚಿಕಿತ್ಸೆಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಆದೇಶಿಸಿದ್ದು, ವರ್ಷವೇ ಕಳೆದಿದೆ. ಆದರೆ ಈವರೆಗೂ ಅನುಷ್ಟಾನಗೊಂಡಿಲ್ಲ. ಆದ್ದರಿಂದ ಈ ಬಗ್ಗೆ ಅಗತ್ಯ ಕಾಳಜಿ ವಹಿಸಿ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು. ಈ ಬಗ್ಗೆ ಅಗತ್ಯ ಕ್ರಮವಹಿಸುವುದಾಗಿ ಶಾಸಕರು ಭರವಸೆ ನೀಡಿದರು.

    ತಾಲೂಕು ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮು, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಸುರೇಶ್, ರಾಜ್ಯ ಪರಿಷತ್ ಸದಸ್ಯ ಫ್ರಾನ್ಸಿಸ್, ಪದವೀಧರ ಶಿಕ್ಷಕರ ಅಧ್ಯಕ್ಷ ಮಾದೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮುನಿಯನಾಯಕ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts