ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಸುಳ್ಯ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಭೇಟಿಯಾಗಿ ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ನೀಡಿ ಸುಳ್ಯ ದಸರಾಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿರುವ ಸಚಿವರು ಅನುದಾನ ಒದಗಿಸಿಕೊಡುವ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿ ದಸರಾ ಉತ್ಸವ ಸಮಿತಿ ಉಪಾಧ್ಯಕ್ಷ ಹರೀಶ್ ಕಂಜಿಪಿಲಿ, ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಅರಂತೋಡು ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಅರಂತೋಡು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ ಸೇರಿದಂತೆ ದಸರಾ ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.