More

    ವಿವಿಧ ಯೋಜನೆ ಜಾರಿಗೊಳಿಸುವಂತೆ ಮನವಿ

    ತಿ.ನರಸೀಪುರ: ನಂಜನಗೂಡು-ತಿ.ನರಸೀಪುರ-ಚಾಮರಾಜನಗರ ವ್ಯಾಪ್ತಿಯಲ್ಲಿ ರೈಲ್ವೆ ಯೋಜನೆ ಕಲ್ಪಿಸಿಕೊಡುವಂತೆ ಹಾಗೂ ವಿವಿಧ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಬಿ.ಪ್ರದೀಪ್ ಅವರು, ವರುಣ ವಿಧಾನ ಸಭಾಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

    ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯತೀಂದ್ರ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಡಾ.ಪ್ರದೀಪ್ ಈ ಭಾಗದ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಕಾನೂನು ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಿ ಅನುಕೂಲ ಮಾಡಿಕೊಡಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೋರ್ಸಿಗೆ ಸರ್ಕಾರಿ ತರಬೇತಿ ಸಂಸ್ಥೆ ಸ್ಥಾಪನೆ ಮಾಡಬೇಕು. ನಂಜನಗೂಡು-ತಿ.ನರಸೀಪುರ-ಚಾಮರಾಜನಗರ ನಡುವೆ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ಶೀಘ್ರ ಆರಂಭವಾಗಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಸಮಯಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಕೋರಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಮುಖ್ಯಮಂತ್ರಿಗಳಿಗೆ ಈ ಕುರಿತಂತೆ ಮಾಹಿತಿ ನೀಡಿ ತಾಲೂಕಿನ ಜನತೆಗೆ ಅನುಕೂಲ ಕಲ್ಪಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಹೇಳಿದರು.

    ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನಹುಂಡಿ ಮಹದೇವಣ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ಕುಪ್ಯಾ ರಘು, ಪುರಸಭಾ ಸದಸ್ಯ ಮಂಜು (ಬಾದಾಮಿ ), ಮಾಜಿ ಸದಸ್ಯ ಗಣೇಶ್, ಮುದ್ದು ಬೀರನ ಹುಂಡಿ ಗುರುಸ್ವಾಮಿ, ಶ್ರೀಕಂಠ, ಅಮಾಸೆಗೌಡ, ಕಿರಗಸೂರು ಆರ್. ಮಹದೇವ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts