ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

manavi
Published on

ಕುಂದಾಪುರ : ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಅಧ್ಯಕ್ಷ ಡಾ.ನಾಗೇಶ ಕುಂದಾಪುರ ಪೊಲೀಸ್ ಉಪಅಧೀಕ್ಷಕ ಬೆಳ್ಳಿಯಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಮೂರ್ತಿರಾಜ್ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ ಘಟನೆ ನ.3ರಂದು ನಡೆದಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಖಂಡಿಸುತ್ತದೆ. ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿ ಮೇಲೆ ಹಿಂಸಾಚಾರ ಮತ್ತು ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದನ್ನು ನಿಷೇಧಿಸುವ ಅಧಿನಿಯಮದನ್ವಯ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸಂಘದ ಕಾರ್ಯದರ್ಶಿ ಡಾ.ಉಮೇಶ ನಾಯಕ್, ಡಾ.ಗೋಪಾಲ ಎನ್.ಜಿ., ಡಾ.ರಂಜಿತ್ ಜಿ., ಡಾ.ಚಿಕ್ಮರಿ, ಡಾ.ಅಮಿತಾ ಹಾಗೂ ಕುಂದಾಪುರ ತಾಲೂಕಿನ ಸರ್ಕಾರಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net