More

    ಭೂ ಸುಧಾರಣಾ ಕಾಯ್ದೆ ರದ್ದತಿಗೆ ಆಗ್ರಹ

    ಮಂಡ್ಯ: ಭೂ ಸುಧಾರಣಾ ಕಾಯ್ದೆ ರದ್ದು ಮಾಡುವಂತೆ ಹಾಗೂ ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ದಾಳಿ ಮಾಡಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ದಸಂಸ ಒಕ್ಕೂಟದ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

    ಭೂಮಿಯ ಒಡೆತನ ಸೇರಿ ರೈತ ಹಾಗೂ ಕೃಷಿ ಕಾರ್ಮಿಕರ ಹಿತಾಸಕ್ತಿಗೆ ಬದ್ಧವಾಗಿದ್ದ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಇಡೀ ದೇಶಕ್ಕೆ ಮಾದರಿಯಾಗಿತ್ತು. ಜನಪರವಾಗಿದ್ದ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ರೈತ ವಿರೋಧಿಯಾಗಿದ್ದು, ಕಾರ್ಪೋರೇಟ್ ಕಂಪನಿಗಳ ಪರವಾದ ನಿಲುವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಕೃಷಿಕರ, ಭೂ ರಹಿತ ಕಾರ್ಮಿಕರ ಹಿತಾಸಕ್ತಿಗಳನ್ನು ಬಲಿಕೊಡುವ ಮತ್ತು ಲಕ್ಷಾಂತರ ಭೂ ರಹಿತ ಬಡವರ ಭೂ ಒಡೆತನದ ಕನಸಿಗೆ ಕೊಳ್ಳಿಇಡುವ ಇಂಥ ತಿದ್ದುಪಡಿ ಪ್ರಸ್ತಾಪವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಅನ್ನ ಕೊಡುವ ಭೂಮಿಯನ್ನು ರೈತರಿಂದ ಕಿತ್ತು ಬಂಡವಾಳಶಾಹಿಗಳಿಗೆ ಪರಭಾರೆ ಮಾಡುವ ದುರುದ್ದೇಶದ ಹಿಂದೆ ರಾಜಕೀಯ ಅಡಗಿದೆ ಎಂದು ಆರೋಪಿಸಿದರು.

    ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮತ್ತು ದೀರ್ಘಕಾಲದವರೆಗೆ ಸಂಘ-ಸಂಸ್ಥೆಗಳಿಗೆ ಗುತ್ತಿಗೆ ನೀಡಿರುವ ಜಮೀನನ್ನು ಗುತ್ತಿಗೆದಾರರಿಗೆ ಪರಭಾರೆ ಮಾಡುವ ಪ್ರಸ್ತಾಪಗಳನ್ನು ಬಿಟ್ಟು, ಭೂರಹಿತ, ಕೃಷಿ ಕಾರ್ಮಿಕರು ಮತ್ತು ಅರಣ್ಯ ವಾಸಿಗಳ ಭೂ ಹಕ್ಕಿನ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು. ಅಂತೆಯೇ, ಮಾನವತಾವಾದಿ ಅಂಬೇಡ್ಕರ್ ಅವರ ಮುಂಬೈ ನಿವಾಸ ರಾಜಗೃಹದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡಿದ ಸಂಘಟನೆ, ವ್ಯಕ್ತಿಗಳನ್ನು ಪತ್ತೆಹಚ್ಚಿ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

    ನಂತರ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು. ವಿವಿಧ ದಲಿತ ಸಂಘರ್ಷ ಸಮಿತಿಗಳ ಮುಂಖಡರಾದ ಗುರುಪ್ರಸಾದ್ ಕೆರಗೋಡು, ಎಂ.ಬಿ.ಶ್ರೀನಿವಾಸ್, ಅಂದಾನಿ ಸೋಮನಹಳ್ಳಿ, ಕೆಂಪಯ್ಯ ಸಾಗ್ಯ, ಎಸ್.ಉಮೇಶ್, ಹನುಮಂತಯ್ಯ ಕೋಣನಹಳ್ಳಿ, ಕುಬೇರಪ್ಪ, ಜವರಯ್ಯ, ರವಿ, ರಮಾನಂದ ತರೀಕೆರೆ, ಅಂಕಯ್ಯ ಮತ್ತಿತರರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts