More

    ನಳ ಜೋಡಣೆ ಕೆಲಸ ನೀಡಿ

    ಬೆಳಗಾವಿ: ಕುಡಿಯುವ ನೀರಿನ ಸಂಪರ್ಕ ಒದಗಿಸುವ ನಳ ಜೋಡಣೆ ಕೆಲಸಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಗಾವಿ ಮಹಾನಗರ ಪ್ಲಂಬರ್ ಸಂಘದ ಪದಾಧಿಕಾರಿಗಳು ಬುಧವಾರ ಪ್ರತಿಭಟಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    50 ವರ್ಷಗಳಿಂದ ಪಾಲಿಕೆ ವ್ಯಾಪ್ತಿಯ ಎಲ್ಲ ನಿವೇಶನ, ಬಹುಮಹಡಿ ಕಟ್ಟಡ ಹಾಗೂ ಇತರ ಎಲ್ಲ ಕಟ್ಟಡಗಳಿಗೆ ಪಾಲಿಕೆಯ ಅನುಮತಿ ಮೇರೆಗೆ ಕುಡಿಯುವ ನೀರಿನ ನಳದ ಸಂಪರ್ಕ ಒದಗಿಸುವ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಆದರೆ, ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರಿನ ಸಂಪರ್ಕ ಒದಗಿಸುವುದನ್ನು ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ.

    ಇದು ಅಸಮಂಜಸ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕುಡಿಯುವ ನೀರಿನ ಸಂಪರ್ಕ ಒದಗಿಸುವ ಕೆಲಸದ ಆಧಾರದಿಂದಲೇ ಕುಟುಂಬದ ನಿರ್ವಹಣೆ ಮಾಡಿಕೊಂಡು ಬರಲಾಗುತ್ತಿದೆ. ಇದೀಗ ಕೆಲಸ ನಿಲ್ಲಿಸಿದ್ದರಿಂದ ಕಾರ್ಮಿಕರ ಕುಟುಂಬಗಳು ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ನಳ ಜೋಡಣೆ ಕೆಲಸಕ್ಕೆ ಅವಕಾಶ ಕಲ್ಪಿಸಿಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು.

    ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರವೀಣ ಹಿರೇಮಠ, ನಾಗೇಶ ಮಾನಪ್ಪನವರ, ಕೆ.ಡಿ.ನಂದವಾಡಕರ, ಜಿ.ಸಿ.ಕಡೋಲಿ, ಪಿ.ಎಂ.ಕುರಣೆ, ಎಸ್.ಎಸ್. ಅಷ್ಟೇಕರ್, ಎ.ಜೆ. ವಾಲೇಕರ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts