ಕೆಐಒಸಿಎಲ್-ಎನ್‌ಎಂಡಿಸಿ ವಿಲೀನ ಚುರುಕು : ವೀರೇಂದ್ರ ಹೆಗ್ಗಡೆಯವರಿಗೆ ನಿಯೋಗ ಮನವಿ

heggade
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಡಿಯಲ್ಲಿರುವ ಸಾರ್ವಜನಿಕ ಉದ್ದಿಮೆ ಕೆಐಒಸಿಎಲ್ ಹಾಗೂ ಎನ್‌ಎಂಡಿಸಿ ಸಂಸ್ಥೆಗಳ ವಿಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೇತೃತ್ವದ ನಿಯೋಗ ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿ ನೀಡಿತು.

ಮನವಿ ಸ್ವೀಕರಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಪ್ರಧಾನಮಂತಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆ ಮಾಡುವಂತೆ ಮನವಿ ಮಾಡುತ್ತೇನೆ. ಸಚಿವ ಕುಮಾರಸ್ವಾಮಿ ಸದ್ಯದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡುವ ಸಮಯದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗುಣಾತ್ಮಕವಾಗಿ ಒಟ್ಟಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡೋಣ ಎಂದರು.

ನಿಯೋಗದಲ್ಲಿ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ದಕ್ಷಿಣ ಕನ್ನಡ ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷ ಭಗವಾನ್ ದಾಸ್ ಬಿ.ಎನ್, ಕೆಂಚೇಗೌಡ, ಖಜಾಂಚಿ ಉದಯ ಕುಮಾರ್ ಬಿ.ಸಿ, ಸಂಘಟನಾ ಕಾರ್ಯದರ್ಶಿ ಶ್ರೀಧರ್ ಉಳ್ಳಾಲ್, ಪಾಲಯ್ಯ, ಶ್ರೀಮಂದ್ರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net