More

    ಅರಣ್ಯ ಇಲಾಖೆಗೆ ಇಂಡೀಕರಣ ಕೈಬಿಡಲು ಪಟ್ಟು

    ಕೋಲಾರ: ರೈತರ ವ್ಯವಸಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಇಂಡೀಕರಿಸಿರುವುದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕೈ ಬಿಡಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಸಮಿತಿ ಜಿಲ್ಲಾ ಸಂಚಾಲಕ ಟಿ.ಎಂ.ವೆಂಕಟೇಶ್ ವಾತನಾಡಿ, ರೈತರು ಉಳಿದರೆ ದೇಶ ಉಳಿಯುತ್ತದೆ. ಸರ್ಕಾರ ಅರಿವಿಲ್ಲದೆ ರೈತರ ಭೂಮಿಯನ್ನು ಅರಣ್ಯ ಇಂಡೀಕರಣದ ಹೆಸರಿನಲ್ಲಿ ಅಕ್ರಮಗೊಳಿಸಲು ಹೊರಟಿದೆ. ಬಗರ್ ಹುಕುಂ ಭೂಮಿಯಲ್ಲಿ ನೂರಾರು ವರ್ಷಗಳಿಂದ ಸಾಗುವಳಿಯಲ್ಲಿ ತೊಡಗಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.

    ರಾಜ್ಯದಲ್ಲಿ ರಾಜರ ಆಳ್ವಿಕೆ ಕಾಲದಿಂದ ರೈತರಿಗೆ ಭೂಮಿ ಹಂಚಿಕೆಯಾಗಿತ್ತು. ಅಂದಿನಿಂದಲೂ ಸುವಾರು 40ಕ್ಕೂ ಹೆಚ್ಚು ಬಾರಿ ಕಂದಾಯ ಮತ್ತು ಭೂ ಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ವಾಡಲಾಗಿದೆ. ಅದರಿಂದಲೇ ಜಿಲ್ಲೆಯಲ್ಲಿ ಭೂಹೀನರಿಗೆ, ಸಣ್ಣ ರೈತರಿಗೆ ಹಾಗೂ ದಲಿತರಿಗೆ ಭೂಮಿ ಹಂಚಿಕೆಯಾಗಿ ಲಕ್ಷಾಂತರ ರೈತರು ಭೂಮಿಯ ಹಕ್ಕುದಾರರಾಗಿದ್ದಾರೆ. ಸರ್ಕಾರ ಇದೀಗ ದೌರ್ಜನ್ಯದಿಂದ ಭೂಮಿ ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
    ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ವಾತನಾಡಿ, ರೈತರಿಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಭೂಮಿ ಮಂಜೂರು ಮಾಡಿದೆ. ಇವತ್ತು ಅರಣ್ಯ ಇಲಾಖೆ ಅಕ್ರಮವಾಗಿ ವಶಪಡಿಸಿಕೊಳ್ಳಲು ಮುಂದಾಗಿದೆ. ಪ್ರಯತ್ನಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತಂದು ರೈತರ ಜಮೀನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು.
    ರೈತ ಸಂದ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ವಾತನಾಡಿ, ಜಿಲ್ಲೆಯಲ್ಲಿ ಬಗರ್‌ಹುಕುಂ ಸಾಗುವಳಿಯಲ್ಲಿ ವಿತರಿಸಿದ ರೈತರ ಭೂಮಿಯನ್ನು ಇಂಡೀಕರಿಸಬಾರದು. ಕೂಡಲೇ ಅರಣ್ಯ ಇಲಾಖೆಯ ಮನವಿಯನ್ನು ತಿರಸ್ಕರಿಸಿ, ರೈತರ ಭೂಮಿಯ ದಾಖಲೆಗಳನ್ನು ಯಾವುದೇ ಕಾರಣಕ್ಕೂ ಬದಲಾವಣೆ ವಾಡಬಾರದು. ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾಡಳಿತದ ಎದುರು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts