More

    ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಸೂರು ಕಲ್ಪಿಸಲು ಮನವಿ

    ಕೋಲಾರ: ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಹಾಗೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಸ್ವಂತ ಸೂರು ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಾರಾಯಣಸ್ವಾಮಿಗೆ ಶನಿವಾರ ಮನವಿ ಸಲ್ಲಿಸಿದರು.

    ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಿ ಅಪೌಷ್ಟಿಕತೆ ಸಮಸ್ಯೆ ನಿವಾರಣೆ ಮಾಡಲು ಕೋಟ್ಯಂತರ ರೂ. ವೆಚ್ಚ ಮಾಡಿ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಸರಬರಾಜು ಮಾಡಲಾಗುತ್ತಿದೆ. ಕಾರ್ಯಕರ್ತರು, ಸಹಾಯಕಿಯರು ಅರ್ಹ ಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸುತ್ತಿಲ್ಲ ಎಂದು ಆರೋಪಿಸಿದರು.
    ಪೌಷ್ಟಿಕ ಆಹಾರ ಪದಾರ್ಥಗಳು 2 ತಿಂಗಳಿಂದ ಸರಬರಾಜಾಗಿಲ್ಲ. ಇದರಿಂದಾಗಿ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಲಭ್ಯವಾಗುತ್ತಿಲ್ಲ. ಸರ್ಕಾರವು ಬಡ ಮಕ್ಕಳ ಜತೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು ಎಂದರು.
    ಮಹಿಳಾ ಸ್ತ್ರೀಶಕ್ತಿ ಸಂಘಗಳಿಗೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲು ಕೋರ್ಟ್​ ಮೆಟ್ಟಿಲೇರಿದ್ದ ಕೆಲ ಸ್ತ್ರೀಶಕ್ತಿ ಸಂಘಗಳ ಮಾಲೀಕರಿಗೆ ನ್ಯಾಯಾಲಯದ ಮುಖಾಂತರ ಟೆಂಡರ್​ ದೊರೆತಿತ್ತು. ಅದರಂತೆ ಸಮರ್ಪಕವಾದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕಾದ ಟೆಂಡರ್​ದಾರರು 2 ತಿಂಗಳಾದರೂ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿಲ್ಲ. ಬಡವರ ಅನ್ನವನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
    ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್​ ಮಾತನಾಡಿ, ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು ಶಿಥಿಲಗೊಂಡಿವೆ. ಕೆಲ ಕೇಂದ್ರಗಳಿಗೆ ಸ್ವಂತ ಕಟ್ಟಡಗಳು ಇಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ಕೇಂದ್ರ ನಡೆಸಲಾಗುತ್ತಿದೆ. ಬಾಡಿಗೆದಾರರ ಹಾಗೂ ಸಿಎಇಪಿಒಗಳ ಹೊಂದಾಣಿಕೆಯಿಂದ ಸ್ವಂತ ಜಾಗ ಗುರುತಿಸುತ್ತಿಲ್ಲ ಎಂದು ಆರೋಪಿಸಿದರು.
    ಮನವಿ ಸ್ವೀಕರಿಸಿ ಮಾತನಾಡಿದ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಬರಾಜು ಮಾಡುವ ಸಮಸ್ಯೆ ಬಗೆಹರಿದಿದ್ದು, 2 ದಿನದಲ್ಲಿ ಆಹಾರ ಪದಾರ್ಥಗಳು ಸರಬರಾಜು ಮಾಡಲಾಗುವುದು, ಕೇಂದ್ರಗಳ ಅಭಿವೃದ್ಧಿಗಾಗಿ ಅನುದಾನಕ್ಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
    ಸಂದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಪದಾಧಿಕಾರಿಗಳಾದ ಮಂಗಸಂದ್ರ ತಿಮ್ಮಣ್ಣ, ಗಿರೀಶ್​, ವೆಂಕಟೇಶಪ್ಪ, ನರಸಿಂಹಣ್ಣ, ಹನುಮಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts