ಕಾಸರಗೋಡಿನಲ್ಲಿ ಕನ್ನಡ ಉಳಿಸಲು ಮನವಿ

New Project (12)
Published on

ಕುಂಬಳೆ: ಕಾಸರಗೋಡಿನ ಕನ್ನಡ ಶಾಲೆಗಳು ಮತ್ತು ಕನ್ನಡ ಭಾಷಿಗರ ಮೇಲೆ ಆಗುತ್ತಿರುವ ದಬ್ಬಾಳಿಕೆ ತಡೆಯಲು ಹಾಗೂ ಕನ್ನಡ ಅಸ್ಮಿತೆಯನ್ನು ಕಾಪಾಡಲು ಕೇರಳ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಕರ್ನಾಟಕ ಸರ್ಕಾರವನ್ನು ಇತ್ತೀಚೆಗೆ ವಿನಂತಿಸಿದೆ.

ಕಾಸರಗೋಡಿನ ಕನ್ನಡ ಭಾಷಿಕರ ಮತ್ತು ಕನ್ನಡ ಶಾಲೆಗಳ ಮೇಲೆ ಆಗುತ್ತಿರುವ ದಬ್ಬಾಳಿಕೆ ಮತ್ತು ಭಾಷಾ ವಿರೋಧಿ ನಿಲುವು ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಕಳವಳಕ್ಕೆ ಒಳಗಾಗಿದೆ. ಈ ನಿಟ್ಟಿನಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ತಾಲೂಕು ಘಟಕದ ಅಧ್ಯಕ್ಷರು ಸಭೆ ನಡೆಸಿ ಪ್ರತಿಭಟನೆ ನಡೆಸಲು ತೀರ್ವಾನಿಸಲಾಯಿತು. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಯ ನೆಲೆಯಲ್ಲಿ ಕೇರಳ ಸರ್ಕಾರದ ಮುಖ್ಯಮಂತ್ರಿ ಮತ್ತು ಸಂಬಂಧಿಸಿದ ಇಲಾಖೆಯನ್ನು ಸಂಪರ್ಕಿಸಿ ಕನ್ನಡಕ್ಕೆ ಭದ್ರ ಬುನಾದಿ ಕಲ್ಪಿಸುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಟಕ ಅಧ್ಯಕ್ಷ ಡಾ.ಜಯಪ್ರಕಾಶ್‌ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಗಮಕ ಕಲಾ ಪರಿಷತ್ತು ಕೇರಳ ಟಕ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ತಾಲೂಕು ಅಧ್ಯಕ್ಷರಾದ ಪುಂಡಲೀಕ ಮರಾಠೆ, ಶ್ರೀನಿವಾಸ ಭಂಡಾರಿ, ಡಾ. ಉಮೇಶ್ ಪುತ್ರನ್, ಡಾ.ರು ನಾಯ್ಕ , ಜಿ.ರಾಮಚಂದ್ರ ಐತಾಳ್, ಪ್ರಭಾಕರ ಶೆಟ್ಟಿ ಮೊದಲಾದವರು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net