More

    ಹಾಲಿ ನ್ಯಾಯಾಧೀಶರ ತನಿಖೆಗೆ ಒಪ್ಪಿಸಲು ಆಗ್ರಹ

    ಕೋಲಾರ: ಮಕ್ಕಳಿಂದ ಮಲದ ಗುಂಡಿ ಶುಚಿಗೊಳಿಸಿದ ಪ್ರಕರಣ ನಡೆದಿರುವ ಜಿಲ್ಲೆಯ ಮಾಲೂರು ತಾಲೂಕಿನ ಯಲವಹಳ್ಳಿ ಮುರಾರ್ಜಿ ದೇಸಾಯಿ ಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಹಾಗೂ ಶಾಲಾ ಶಿಕ್ಷಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

    ಡಿ.1ರಂದೇ ಪ್ರಕರಣ ಸಂಭವಿಸಿದ್ದರೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ಸಮರ್ಪಕವಾದ ಉತ್ತರ ಬರದಿದ್ದಾಗ ಅಶೋಕ್ ಮತ್ತಷ್ಟು ವ್ಯಗ್ರರಾದರು. ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಶಾಲಾ ಮಕ್ಕಳಿಂದ ಮಲದ ಗುಂಡಿ ಸ್ವಚ್ಚ ಮಾಡಿಸಿದ್ದಾರೆ ಎಂದರೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವೈಲ್ಯ ಸ್ಪಷ್ಟವಾಗಿದೆ. ಕಾಲಕಾಲಕ್ಕೆ ವಸತಿ ನಿಲಯಕ್ಕೆ ಭೇಟಿ ನೀಡಿದ್ದರೆ ಇಂತಹ ಕೃತ್ಯ ಸಂಭವಿಸುತ್ತಿರಲಿಲ್ಲ. ಮಕ್ಕಳ ಪ್ರಾಣಕ್ಕೆ ಅಪಾಯವಾಗಿದ್ದರೆ ಯಾರು ಹೊಣೆ ಎಂದು ಕಿಡಿಕಾರಿದರು.
    ಅಧಿಕಾರಿಗಳು ಹಾಗೂ ಮಕ್ಕಳ ಜತೆಗೆ ಸಭೆ ನಡೆಸಿದ ಆರ್.ಅಶೋಕ್, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಆನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

    ಡಿ.1ರಂದು ಟನೆ ನಡೆದಿದ್ದರೂ ಇಲ್ಲಿಗೆ ದೊಡ್ಡ ವ್ಯಕ್ತಿಗಳು ಬಂದು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಸವಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ವಿಡಿಯೋ, ದೂರು ಬಂದಿದ್ದರೂ ಸುಮ್ಮನಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ವಿಚಾರ ಹೊರಗೆ ಬಂದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣದಿಂದಲೇ ಅಧಿಕಾರಿ, ಜನಪ್ರತಿನಿಧಿಗಳು ಎಲ್ಲರೂ ಸೇರಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ವಾಡಿದ್ದಾರೆ ಎಂದು ಅಶೋಕ್ ಆರೋಪಿಸಿದರು.
    ನಾನು ಮಕ್ಕಳನ್ನು ಭೇಟಿ ವಾಡಿ ವಿಚಾರಿಸಿದೆ. ತೊಂದರೆ ಆಗಿರುವ ಬಗ್ಗೆ ಮಕ್ಕಳು ಹೇಳಿಕೊಂಡರು. ಯಾವುದೋ ಹಳ್ಳಿಗೆ ಬೆಳಗ್ಗೆ ತಿಂಡಿಯೂ ಇಲ್ಲದೆ ನಾವೇ ಹೋಗಿ ಕಾಡಿನಲ್ಲಿ ಬಿದಿರು ಕಡಿದುಕೊಂಡು ಬಂದಿದ್ದೆವು. ಒಮ್ಮೆ ನಾಗರಹಾವು ನಮ್ಮ ಕಡೆಗೆ ಅಟ್ಟಿಸಿಕೊಂಡು ಬಂದಿತ್ತು. ತಪ್ಪಿಸಿಕೊಂಡು ಓಡಿ ಬಂದಿದ್ದೆವು. ಕಚ್ಚಿದ್ದರೆ ಯಾರು ಹೊಣೆ ಎಂದು ಮಕ್ಕಳು ಪ್ರಶ್ನಿಸಿದರು ಎಂದು ಅಶೋಕ್ ತಿಳಿಸಿದರು.



    • ಗುಂಪುಗಾರಿಕೆ, ದುಡ್ಡು ವಸೂಲಿ ನಡೆಯುತ್ತಿತ್ತು. ಗಾಜು ಇದ್ದ ಕಾರಣ ಶೌಚಗುಂಡಿಗೆ ಇಳಿದ ಮಕ್ಕಳಲ್ಲಿ ಒಬ್ಬರ ಕಾಲಿಗೆ ಗಾಯವಾಗಿದೆ. ಶೌಚಗುಂಡಿಗೆ ಇಳಿದ ಮಕ್ಕಳ ಬಟ್ಟೆಗಳನ್ನು ಸುಟ್ಟು ಹಾಕಿದ್ದಾರೆ. ಹಲವು ಮಕ್ಕಳಿಗೆ ಸ್ಕಿನ್ ಅಲರ್ಜಿ ಆಗಿದೆ. ಈ ಸರ್ಕಾರಕ್ಕೆ ಕಣ್ಣು ಇಲ್ಲ ಎಂದು ಅಶೋಕ್ ಟೀಕಿಸಿದರು. ಶೌಚಗುಂಡಿಗೆ ಇಳಿದು ಶುಚಿ ವಾಡಿದ್ದನ್ನು ನಾಗರಿಕ ಸವಾಜ ಒಪ್ಪಲು ಸಾಧ್ಯವಿಲ್ಲ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸಗೊಳಿಸಿದ ಅವಾನವೀಯ ಟನೆ ನಡೆದಿದೆ. ಇಲ್ಲಿ ಈ ಥರ ಮಕ್ಕಳಿಂದ ಕಮೋಡ್, ಬಾತ್ ರೂಂ, ಶೌಚಗುಂಡಿ ಶುಚಿಗೊಳಿಸಿದ್ದಾರೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು ತರುವಂತಿದೆ ಎಂದು ಅಶೋಕ್ ಆರೋಪಿಸಿದರು.

    ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ಕಾನೂನಿನ ಭಯವೇ ಇಲ್ಲ. ಸರಿಯಾಗಿ ಊಟ ಕೊಡುತ್ತಿರಲಿಲ್ಲ. ತರಕಾರಿ ಇಲ್ಲವೇ ಇಲ್ಲ, ಮೆನು ಪ್ರಕಾರ ಇಲ್ಲಿ ಸರಬರಾಜು ವಾಡುತ್ತಿಲ್ಲ. 240 ಮಕ್ಕಳಿಗೆ 4 ಲೀಟರ್ ಹಾಲು ತರಿಸುತ್ತಿದ್ದರು. ಕೆಟ್ಟು ಹೋದ ಮೊಟ್ಟೆ ಕೊಡುತ್ತಿದ್ದರು ಎಂದು ಮಕ್ಕಳು ಅಳಲು ತೊಡಿಕೊಂಡಿದ್ದಾರೆ. ಇನ್ನು ಮಕ್ಕಳಿಗೆ ಯಾವ ರೀತಿ ಊಟ ಕೊಡುತ್ತಿದ್ದರೊ? ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.


    • ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿ ಹೋಗಿದೆ
      ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಗುವಿನ ದೇಹ ಕೇಳಿದರೆ ದುಡ್ಡಿಗಾಗಿ ಪೀಡಿಸಿದ್ದಾರೆ. ಅದರ ವಿಡಿಯೋ ಲಭ್ಯವಾಗಿದೆ. ಸರ್ಕಾರ ಭ್ರಷ್ಟಾಚಾರದಿಂದ ಜೀವನ ನಡೆಸುತ್ತಿದೆ ಎಂಬುದಕ್ಕೆ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದ ಪ್ರತಿಪಕ್ಷದ ನಾಯಕರು, ನಂಜನಗೂಡಿನಲ್ಲಿ ಹೊಲಕ್ಕೆ ಹೋದ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿದೆ. ಸರಕಾರಕ್ಕೆ ತಾಳ, ಮೇಳ ಇಲ್ಲ. ವರ್ಗಾವಣೆ ದಂಧೆಯಲ್ಲಿ ಅದು ತೊಡಗಿದೆ ಎಂದು ದೂರಿದರು. ವಸೂಲಿ ವ್ಯವಹಾರ ನಡೆದಿದೆ. ವಿಡಿಯೋ ವಾಡಿದ ಟನೆಯೂ ಇಲ್ಲಿ ಆಗಿರುವ ದೂರು ಇದೆ. ಹೆಣ್ಣು ಮಕ್ಕಳನ್ನು ಹಾಸ್ಟೆಲ್‌ಗೆ ಕಳಿಸುವುದು ಹೇಗೆ?, ಇಲ್ಲಿ ಪ್ರಾಂಶುಪಾಲರು ಸೇರಿ 13 ಜನರಿಗೂ ಮನೆ ಕೊಟ್ಟಿದ್ದರೂ 3 ಜನ ವಾತ್ರ ಇಲ್ಲಿ ಇದ್ದಾರೆ. ಉಳಿದವರು ವಿಸಿಟಿಂಗ್ ಥರ ಇದ್ದಾರೆ ಎಂದು ಆಕ್ಷೇಪಿಸಿದರು.

    • ಟಿಪ್ಪು ಸುಲ್ತಾನ್ ಒಬ್ಬ ದೇಶದ್ರೋಹಿ, ಕೂಲಿ ಕೆಲಸಕ್ಕಾಗಿ ಮೈಸೂರು ಮಹಾರಾಜರ ಕಾಲದಲ್ಲಿ ರಾಜ್ಯಕ್ಕೆ ಬಂದ ವ್ಯಕ್ತಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸುವ ನೆಪದಲ್ಲಿ ಮಹಾರಾಜರನ್ನೇ ಬಂಧಿಸುವ ಪ್ರಯತ್ನ ಮಾಡಿದ್ದರು. ಹಿಂದೂಗಳನ್ನು ಕೊಲ್ಲಲು ಕತ್ತಿ ಇರುವುದು ಎಂದು ಬರೆದಿದ್ದರು. ಆ ಕತ್ತಿಯನ್ನು ಯಾರು ಯಾರು ಬಳಕೆ ಮಾಡಿದ್ದರು ಅವರೆಲ್ಲ ಮುಳುಗಿಹೋಗಿದ್ದಾರೆ, ಅದೇ ಗತಿಯೇ ಸರ್ಕಾರಕ್ಕೆ ಬರುತ್ತದೆ ಎಂದು ಛೇಡಿಸಿದರು.
      ಟಿಪ್ಪು ಹೆಸರಿನಲ್ಲಿ ಸಿನಿಮಾ ಮಾಡಿದವರು, ಹೆಸರು ಬಳಕೆ ಮಾಡಿಕೊಂಡವರು ಯಾರೂ ಇಲ್ಲ, ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಳ್ಳದಿದ್ದರೆ ಹೋರಾಟ ನಡೆಸುತ್ತೇವೆ, ಮೈಸೂರು ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ನಾಮಕಾರಣ ಮಾಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts