More

    ಜಿಲ್ಲೆ ಟಾಪ್ 10ರಲ್ಲಿ ಇರಲಿ

    ಶಿವಮೊಗ್ಗ: ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಮೊದಲ 10 ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು. ಗುರಿ ಸಾಧನೆಗೆ ಅಗತ್ಯವಿದ್ದರೆ ಶಿಕ್ಷಕರಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಎಂ.ಎಲ್.ವೈಶಾಲಿ, ಡಿಡಿಪಿಐ ಎನ್.ಎಂ.ರಮೇಶ್ ಅವರಿಗೆ ಸೂಚನೆ ನೀಡಿದರು.

    ಜಿಲ್ಲೆ ಮೊದಲ ಹತ್ತರ ಪಟ್ಟಿಯಲ್ಲಿರುವಂತೆ ಯೋಜನೆ ರೂಪಿಸುವ ಜತೆಗೆ ಬೋಧನೆಯಲ್ಲಿ ಪರಿಣಾಮಕಾರಿ ತಂತ್ರಗಳನ್ನು ಬಳಸಬೇಕು. ಯಾವ ಶಿಕ್ಷಕರೂ ಬೋಧನಾ ಕ್ರಮದಲ್ಲಿ ನಿರ್ಲಕ್ಷ್ಯ ವಹಿಸಬಾರದು. ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸಬೇಕು ಎಂದು ತಿಳಿಸಿದರು.

    ಶನಿವಾರ ಜಿಪಂ ಸಭಾಂಗಣದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಲ್ಲ ಶಾಲೆಗಳಲ್ಲೂ ಕಡ್ಡಾಯವಾಗಿ ಕರೊನಾ ಮಾರ್ಗಸೂಚಿ ಅನುಸರಿಸಬೇಕು. ಅಧಿಕಾರಿಗಳು ಇದನ್ನು ಖಾತ್ರಿಪಡಿಸಿಕೊಳ್ಳಬೇಕು. ಶಾಲೆಯ ವಾತಾವರಣದಲ್ಲಿ ಯಾವ ವಿದ್ಯಾರ್ಥಿಗೂ ಕರೊನಾ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

    ಪ್ರತಿ ಶಾಲೆಯಲ್ಲೂ ಥರ್ಮಲ್ ಸ್ಕ್ರೀನಿಂಗ್ ಇರುವಂತೆ ನೋಡಿಕೊಳ್ಳಬೇಕು. ಗ್ರಾಪಂ ಚುನಾವಣೆ ಸಂದರ್ಭದಲ್ಲಿ ತಾಲೂಕು ಆಡಳಿತ ಖರೀದಿಸಿದ್ದ ಥರ್ಮಲ್ ಸ್ಕ್ರೀನಿಂಗ್ ಉಪಕರಣವನ್ನು ಶಾಲೆಗಳಿಗೆ ಬಳಸಿಕೊಳ್ಳಬಹುದು. ಅಗತ್ಯಬಿದ್ದರೆ ಹೆಚ್ಚುವರಿ ಉಪಕರಣ ಖರೀದಿಸಲು ಅವಕಾಶವಿದೆ ಎಂದು ತಿಳಿಸಿದರು.

    ಡಿಡಿಪಿಐ ಎನ್.ಎಂ.ರಮೇಶ್ ಮಾತನಾಡಿ, ಎಲ್ಲ ಶಾಲೆಗಳಲ್ಲೂ ಕರೊನಾ ಮಾರ್ಗಸೂಚಿ ಪಾಲನೆಯಾಗುತ್ತಿದೆ. ಮಕ್ಕಳ ಸಂಖ್ಯೆ ಕಡಿಮೆ ಇದ್ದು ಹೆಚ್ಚು ಕೊಠಡಿಗಳಿದ್ದರೆ ಸೂಕ್ತ ಮಾರ್ಗಸೂಚಿಯೊಂದಿಗೆ ನಿರಂತರವಾಗಿ ಶಾಲೆಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಶಾಲೆ ಆರಂಭದ ಬಳಿಕ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಶಿಕ್ಷಕರಲ್ಲಿ ಕರೊನಾ ಕಾಣಿಸಿಕೊಂಡಿಲ್ಲ ಎಂದರು.

    ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉಪಾಧ್ಯಕ್ಷ ಮೋಹನ್​ಕುಮಾರ್, ಡಯಟ್ ಪ್ರಚಾರ್ಯ ಬಿ.ಆರ್.ಬಸವರಾಜಪ್ಪ ಇದ್ದರು. ಜಿಲ್ಲೆ ಹಾಗೂ ತಾಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳು, ಎಲ್ಲ ತಾಲೂಕಿನ ಬಿಇಒಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts