

ಸುಳ್ಯ: ಕಲ್ಲುಗುಂಡಿಯಲ್ಲಿ ಶುಕ್ರವಾರ ಗಾಯಗೊಂಡು ಹೊಳೆಯಲ್ಲಿ ಬಿದ್ದು ಜೀವನ್ಮರಣ ಹೋರಾಟ ಮಾಡುತ್ತಿದ್ದ ದನವನ್ನು ಸ್ಥಳೀಯರು ರಕ್ಷಿಸಿದ್ದಾರೆ.
ನದಿಯಲ್ಲಿ ಗಾಯಗೊಂಡು ಬಿದ್ದಿದ್ದ ದನಕ್ಕೆ ಮೇಲೆ ಬರಲು ಸಾಧ್ಯವಾಗದೆ ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡು ಸ್ಥಳೀಯರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿ ಹಾಗೂ ಪಂಚಾಯಿತಿ ಅಧ್ಯಕ್ಷೆ ಸುಮತಿ ಶಕ್ತಿವೇಲು ಹಾಗೂ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್, ಉಪಾಧ್ಯಕ್ಷ ಎಸ್.ಕೆ.ಹನೀಫ್ ಅಗ್ನಿ ಶಾಮಕ ದಳದವರಿಗೆ ಕರೆ ಮಾಡಿದ್ದು, ಸ್ಥಳೀಯರ ಸಹಕಾರದಿಂದ ದನವನ್ನು ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ. ಬಳಿಕ ಸುಳ್ಯದ ಪಶು ಇಲಾಖೆಯವರನ್ನು ಕರೆಸಿ ಪಶುವಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಿದ್ದಾರೆ.