ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ !

cattle
ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ ಮಾಡಲಾಯಿತು.
Published on

ವಿಜಯವಾಣಿ ಸುದ್ದಿಜಾಲ ಉಪ್ಪಿನಂಗಡಿ

ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವನ್ನು ಉಪ್ಪಿನಂಗಡಿಯಲ್ಲಿರುವ ಗೃಹ ರಕ್ಷಕ ದಳ ಒಳಗೊಂಡ ಪ್ರವಾಹ ರಕ್ಷಣಾ ತಂಡ ಪ್ರಯಾಸದಿಂದ ರಕ್ಷಣೆ ಮಾಡಿ ದಡಕ್ಕೆ ಸೇರಿಸಿದೆ.

ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪುಂಡುಪಿಲ ಎಂಬಲ್ಲಿ 40 ಅಡಿ ಎತ್ತರದ ಗುಡ್ಡದಿಂದ ತೋಡಿಗೆ ಬಿದ್ದ ಈ ದನ ನೆರೆ ನೀರಿನಲ್ಲಿ ಕೊಚ್ಚಿ ಕೊಂಡು ನೇತ್ರಾವತಿ ನದಿಗೆ ಸೇರಿತ್ತು. ಸಮುದ್ರಮಟ್ಟದಿಂದ 28.05 ಮೀ. ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ದನ ಕೊಚ್ಚಿಕೊಂಡು ಹೋಗುತ್ತಿರುವುದನ್ನು ಕಂಡ ಹಳೆಗೇಟು ಬಳಿಯ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲೀಕ ಚಂದಪ್ಪ ಅವರು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಬೀಡು ಬಿಟ್ಟಿರುವ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದರು.

ತಕ್ಷಣವೇ ಕಾರ್ಯಪ್ರವೃತವಾದ ಈ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ ಮೂಲಕ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿ ಸೇತುವೆಯ ಬಳಿ ತೆರಳುತ್ತಿರುವಾಗ ಎದುರಿನಿಂದ ನದಿಯ ಮಧ್ಯ ಭಾಗದಲ್ಲಿ ದನವು ನೀರಿನಲ್ಲಿ ಕೊಚ್ಚಿಕೊಂಡು ಬರುವುದನ್ನು ಕಂಡು ಅಲ್ಲಿಯೇ ಕಾರ್ಯಾಚರಣೆ ನಡೆಸಿ, ದನದ ಮೂಗುದಾರಕ್ಕೆ ಹಗ್ಗವನ್ನು ಕಟ್ಟಿ ದೇವಾಲಯದ ಬಳಿ ದಡಕ್ಕೆ ತಂದು ಕಟ್ಟಿ ಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net