More

    ಹಕ್ಲಾಡಿಯಲ್ಲಿ ಬಾವಿಗೆ ಬಿದ್ದ ಚಿರತೆ ರಕ್ಷಣೆ

    ಕುಂದಾಪುರ: ಹಕ್ಲಾಡಿ ಗ್ರಾಮದ ಕುಂದಬಾರಂದಾಡಿ ಕೋಳೂರು ಬಳಿ ಮಾಸ್ತಿ ಎಂಬುವರ ಮನೆ ಆವರಣವಿಲ್ಲದ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ರಕ್ಷಿಸಿದ್ದಾರೆ.

    ಭಾನುವಾರ ರಾತ್ರಿ ಚಿರತೆ ಬಾವಿಗೆ ಬಿದ್ದಿದೆ. ಸೋಮವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಾವಿಗೆ ಬೋನು ಇಳಿಬಿಟ್ಟು ಕಾರ್ಯಾಚರಣೆ ನಡೆಸಿ ಮೇಲೆತ್ತಿದ್ದಾರೆ. 4ರಿಂದ 5 ವರ್ಷದ ಹೆಣ್ಣು ಚಿರತೆ ಇದಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣ್‌ಬಾಬು, ಆಲೂರು ಉಪ ವಲಯ ಅರಣ್ಯಾಧಿಕಾರಿ ದಿಲೀಪ್ ಕುಮಾರ್, ಜಡ್ಕಲ್ ಶಾಖೆ ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಅರಣ್ಯ ರಕ್ಷಕ ಆನಂದ ಬಳೆಗಾರ, ರಮೇಶ, ಮಂಜುನಾಥ ಗಾಣಿಗ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ಕುಂದಬಾರಂದಾಡಿಯಲ್ಲಿ ಚಿರತೆ ಕಾಟದ ಬಗ್ಗೆ ‘ವಿಜಯವಾಣಿ’ ಸರಣಿ ವರದಿ ಮಾಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts