More

    ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ

    ಬೆಳಗಾವಿ: ಶೈಕ್ಷಣಿಕ ರಂಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ನೀಡುವ ಸೌಲಭ್ಯದ ಸದುಪಯೋಗ ಮಾಡಿಕೊಂಡು ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಲಹೆ ನೀಡಿದ್ದಾರೆ.

    ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಸ್‌ಸಿಟಿ, ಟಿಎಸ್‌ಪಿ ಅನುದಾನ ಅಡಿಯಲ್ಲಿ ಎಸ್‌ಸಿ, ಎಸ್‌ಟಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿಭಾಗದ 45 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಆರ್‌ಸಿಯು ಕುಲಪತಿ ಪ್ರೊ. ಎಂ.ರಾಮಚಂದ್ರಗೌಡ ಮಾತನಾಡಿ, ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ ರಾಜ್ಯದಲ್ಲಿ ದೊಡ್ಡದಾಗಿರುವ ಈ ವಿವಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ದಶಮಾನೋತ್ಸವ ಅಂಗವಾಗಿ ವಿವಿಧ ಹೊಸ ವಿಭಾಗಗಳ ಆರಂಭ, ವಿಚಾರ ಸಂಕಿರಣ, ಕಮ್ಮಟಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
    ರಾಣಿ ಚನ್ನಮ್ಮ ವಿವಿಗೆ ಹಿರೇಬಾಗೇವಾಡಿ ಬಳಿ ಜಮೀನು ಒದಗಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಎಲ್ಲ ಜನಪ್ರತಿನಿಧಿಗಳಿಗೆ ಮತ್ತು ವಿಶ್ವವಿದ್ಯಾಲಯಕ್ಕೆ ಜಮೀನು ನೀಡಿದ ರೈತರಿಗೆ ಕುಲಪತಿಗಳು ಇದೇ ವೇಳೆ ಕೃತಜ್ಞತೆ ಸಲ್ಲಿಸಿದರು.

    ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಕೆ.ವಿ., ಎಸ್ಪಿ ಲಕ್ಷ್ಮಣ ನಿಂಬರಗಿ, ಕುಲಸಚಿವ ಬಸವರಾಜ ಪದ್ಮಸಾಲಿ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts