More

    ‘ನಮಗೂ ಮೀಸಲಾತಿ ಹೆಚ್ಚಿಸಿ’ ಎಂದು ಒಕ್ಕಲಿಗರ ಸಂಘದ ಒತ್ತಾಯ; ಶೇ. 4ರಿಂದ 10ಕ್ಕೆ ಏರಿಸಲು ಬೇಡಿಕೆ

    ಬೆಂಗಳೂರು: ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶಾಸಕರೂ ಆಗಿರುವ ಸಿ.ಎನ್.ಬಾಲಕೃಷ್ಣ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ರಾಜ್ಯದ ಜನಸಂಖ್ಯೆಯಲ್ಲಿ ಶೇ.16ರಷ್ಟು ನಮ್ಮ ಸಮುದಾಯದವರಿದ್ದಾರೆ. ಹೀಗಾಗಿ ಶೇ.4ರ ಮೀಸಲಾತಿ ಕಡಿಮೆಯಾಗಿದೆ. ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ 3ಎ ಅಡಿಯಲ್ಲಿ ಒಕ್ಕಲಿಗರ ಸಮುದಾಯ ಸೇರಿಸಲಾಗಿದೆ. 3ಎ ನಲ್ಲಿ ಒಕ್ಕಲಿಗರ ಉಪ ಪಂಗಡಗಳು ಹಾಗೂ ಇತರೆ ಜಾತಿಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.

    ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಮತ್ತು ಪಂಗಡದವರ ಮೀಸಲಾತಿಯನ್ನು ಶೇ.3 ರಿಂದ ಶೇ.7 ಕ್ಕೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಳ ಮಾಡಿರುವುದನ್ನು ಒಕ್ಕಲಿಗರ ಸಂಘ ಸ್ವಾಗತಿಸುತ್ತದೆ. ಅದೇ ರೀತಿ 3ಎ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸುವ ಮೂಲಕ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ. ಬೇರೆ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಲು ನಮ್ಮ ಅಭ್ಯಂತರವಿಲ್ಲ ಎಂದೂ ಅವರು ಹೇಳಿದ್ದಾರೆ.

    ನಮ್ಮ ಸಮುದಾಯ ಅನಾದಿಕಾಲದಿಂದಲೂ ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೇಸಾಯದ ವೆಚ್ಚ ದಿನದಿಂದ ದಿನಕ್ಕೆ ದುಬಾರಿಯಾಗಿದ್ದು, ಅತಿವೃಷ್ಟಿ, ಪ್ರವಾಹ, ಬರ, ಕೀಟ ಹಾಗೂ ರೋಗಬಾಧೆಯಿಂದ ಪದೇಪದೆ ಸಂಕಷ್ಟಕ್ಕೆ ಸಿಲುಕುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

    ನಮ್ಮ ಸಮುದಾಯದ ಶೇ.70ರಷ್ಟು ಮಂದಿ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಸಾಕಷ್ಟು ಬಡವರು, ನಮ್ಮ ಸಮುದಾಯದಲ್ಲೂ ಇದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಸಂಖ್ಯೆಯಲ್ಲಿ ಶೇ.16ರಷ್ಟಿರುವ ನಮ್ಮ ಸಮುದಾಯದ 3ಎ ಮೀಸಲಾತಿ ಪ್ರಮಾಣವನ್ನು ಶೇ. 4ರಿಂದ ಶೇ.10ಕ್ಕೆ ಹೆಚ್ಚಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು. ಉದ್ಯೋಗ ಹಾಗೂ ಶಿಕ್ಷಣದಲ್ಲಿ ಕೂಡಲೇ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಮೀಸಲಾತಿ ಹೆಚ್ಚಳಕ್ಕಾಗಿ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಆಗಲಿದೆ ಎಂದು ಅವರು ಸಂಘದ ಪರವಾಗಿ ಎಚ್ಚರಿಸಿದ್ದಾರೆ.

    ಪುನೀತ್​ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸಂಗತಿ: ‘ಗಂಧದಗುಡಿ’ ಜೊತೆಗೇ ‘ಅಪ್ಪು ಕಪ್’ ಸಂಭ್ರಮ

    ಮುಂಬೈನಲ್ಲಿ ಈ 2 ಪ್ರಥಮಗಳನ್ನು ಸಾಧಿಸಿದ ಮೊದಲ ಕನ್ನಡ ಸಿನಿಮಾ ‘ಕಾಂತಾರ’!

    ವಾಹನ ಸವಾರರಿಗೆ ವಿಶೇಷ ಸೂಚನೆ, ನಿಮ್ಮ ಜೀವಕ್ಕೆ ನೀವೇ ಹೊಣೆ: ಆಸ್ಪತ್ರೆಗಾಗಿ ಹೀಗೊಂದು ಹೊಸ ಥರದ ಫಲಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts