

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಇಲಾಖೆಗಳಿಗೆ ಭರಪೂರ ಅನುದಾನವನ್ನು ಘೋಷಿಸಿದ್ದಾರೆ. ಮೂಲಸೌಕರ್ಯ ಕ್ಷೇತ್ರ, ಮಲ್ಟಿಫ್ಲೆಕ್ಸ್ನಲ್ಲಿ ಏಕರೂಪ ದರ ನಿಗದಿ ಸೇರಿದಂತೆ ಪ್ರಮುಖ ಘೋಷಣೆಗಳನ್ನು ಮಾಡಿದ್ದು, ಎಸ್ಸಿ-ಎಸ್ಟಿ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಬಜೆಟ್ನಲ್ಲಿ ಮೀಸಲಾತಿಯನ್ನು ಘೊಷಿಸಲಾಗಿದೆ.
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಇನ್ನೂ ಬಜೆಟ್ನಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಗಿದ್ದು, ವೃತ್ತಿ ತೆರಿಗೆಯನ್ನು 200 ರೂ. ರಿಂದ 300 ರೂ.ಗೆ ವೃತ್ತಿ ತೆರಿಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ ಮಾಡಲಾಗಿದ್ದು, ಈ ಯೋಜನೆಯಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.