More

    ವಸತಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ

    ರಾಯಚೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಿಂದ ನಡೆಸಲಾಗುವ ವಸತಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಯೊಂದಿಗೆ ಮೂಲಸೌಕರ್ಯ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

    ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮಂಗಳವಾರ ಮನವಿ ಸಲ್ಲಿಸಿದರು. ವಸತಿ ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ದೊರೆಯದಂತಾಗಿದೆ. ಕೂಡಲೇ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ನವೋದಯ, ಮುರಾರ್ಜಿ, ಏಕಲವ್ಯ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ, ಮೂಲ ಸೌಕರ್ಯಗಳಿಲ್ಲದ ಕಾರಣ ವಿದ್ಯಾರ್ಥಿಗಳ ಶಿಕ್ಷಣ ಕುಂಠಿತವಾಗುವಂತಾಗಿದೆ. ವಿದ್ಯಾರ್ಥಿಗಳ ಊಟೋಪಚಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಗುಣಮಟ್ಟದ ಆಹಾರ ನೀಡಬೇಕು. ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts