ತೆಗೆದು ಹಾಕಿ ಇಲ್ಲವಾದಲ್ಲಿ ರಾಜೀನಾಮೆ ಕೊಡಿ; ಶ್ರೀಲಂಕಾ ವಿರುದ್ಧ ಸರಣಿ ಸೋಲಿನ ಬಳಿಕ ಗೌತಿ ವಿರುದ್ಧ ಕಿಡಿಕಾರಿದ ಫ್ಯಾನ್ಸ್​

Gautam Gambhir

ನವದೆಹಲಿ: ಟೀಮ್​ ಇಂಡಿಯಾ ಲೆಜೆಂಡರಿ ಆಟಗಾರ ಗೌತಮ್ ಗಂಭೀರ್​ ದಿನದಿಂದ ದಿನಕ್ಕೆ ತಮ್ಮ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. 17ನೇ ಆವೃತ್ತಿಯ ಐಪಿಎಲ್​ನಲ್ಲಿ ಕೆಕೆಆರ್​ ಮೆಂಟರ್​ ಆಗಿ ಅಧಿಕಾರವಹಿಸಿಕೊಂಡ ಗೌತಮ್​ ಸಂಯೋಜನೆ ಬದಲಿಸುವ ಮೂಲಕ ತಂಡ ಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಾದ ಬಳಿಕ ಅವರು ಟೀಮ್​ ಇಂಡಿಯಾದ ಕೋಚ್​ ಆಗಿ ಅಧಿಕಾರ ವಹಿಸಿಕೊಂಡಿದ್ದು, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸಿಹಿ-ಕಹಿ ಎರಡು ದೊರೆತಿದೆ.

ಜುಲೈ ಅಂತ್ಯದಲ್ಲಿ ಶ್ರೀಲಂಕಾ ವಿರುದ್ದ ಆರಂಭವಾದ ಸರಣಿಯಲ್ಲಿ ಕೋಚ್​ ಆಗಿ ಅಧಿಕಾರ ವಹಿಸಿಕೊಂಡ ಗೌತಮ್​ ತಮ್ಮ ಕಾರ್ಯತಂತ್ರದ ಮೂಲಕ ಟಿ20 ಸೀರೀಸ್​ಅನ್ನು ಗೆಲ್ಲಿಸಿದ್ದರು. ಅದೇ ರೀತಿ ಏಕದಿನ ಸರಣಿಯಲ್ಲಿ ತಂಡವನ್ನು ಗೆಲ್ಲಿಸಲಿದ್ದಾರೆ ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗಿತಾದರೂ ಇಲ್ಲದ ಪ್ರಯೋಗ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ. ಇದೀಗ ಗೌತಮ್​ರನ್ನು ಕೋಚ್​ ಸ್ಥಾನದಿಂದ ವಜಾ ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದು, ಅನುಭವಿಗಳನ್ನು ನೇಮಿಸುವಂತೆ ಕ್ರೀಡಾಭಿಮಾನಿಗಳು ಬಿಸಿಸಿಐಗೆ ಒತ್ತಾಯಿಸಿದ್ದಾರೆ.

ಏಕೆಂದರೆ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಕೆಕೆಆರ್​ ತಂಡವನ್ನು ಚಾಂಪಿಯನ್​​ ಆಗಿಸಿದ ಬೆನ್ನಲ್ಲೇ ಮೆಂಟರ್​ ಆಗಿದ್ದ ಗೌತಮ್​ ಗಂಭೀರ್ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗಿ ನೇಮಕ ಮಾಡಲಾಯಿತು. 2025ರಲ್ಲಿ ಚಾಂಪಿಯನ್ಸ್​ ಟ್ರೋಫಿ, ವಿಶ್ವ ಟೆಸ್ಟ್​ ಚಾಂಪಿಯನ್​ಶಿಫ್​, 2026ರಲ್ಲಿ ನಡೆಯುವ ಟಿ20 ವಿಶ್ವಕಪ್​, 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗೆ ತಂಡವನ್ನು ಸಜ್ಜುಗೊಳಿಸಬೇಕಿದೆ. ಗೌತಮ್​ ಮುಂದೆ ಬೆಟ್ಟದಷ್ಟು ಸವಾಲಿದ್ದು, ಆರಂಭದಲ್ಲೇ ಎಡವಿರುವುದು ಕ್ರೀಡಾಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇದಲ್ಲದೆ ವೈಯಕ್ತಿಯವಾಗಿಯೂ ಅವರ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಸೋತಿದ್ದೇವೆ ಎಂದಾಕ್ಷಣ ಪ್ರಪಂಚ… ಏಕದಿನ ಸರಣಿ ಸೋಲಿನ ಬಳಿಕ ರೋಹಿತ್​ ಶರ್ಮ ಹೇಳಿದ್ದಿಷ್ಟು

ಏಕೆಂದರೆ ಶ್ರೀಲಂಕಾ ವಿರುದ್ಧ ಭಾರತ ಕಳೆದ 27 ವರ್ಷಗಳಲ್ಲಿ ಯಾವುದೇ ಸರಣಿ ಸೋತಿರಲಿಲ್ಲ. ಗೌತಮ್​ ಗಂಭೀರ್​ ಮಾರ್ಗದರ್ಶನದಲ್ಲಿ ಸೋತಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಐಪಿಎಲ್​ನಲ್ಲಿ ತಂಡದ ಮೆಂಟರ್​ ಆಗಿ ಕಾರ್ಯನಿರ್ವಹಿಸುವುದೇ ಬೇರೆ, ರಾಷ್ಟ್ರೀಯ ತಂಡದ ಕೋಚ್​ ಆಗಿ ಕೆಲಸ ಮಾಡುವುದೇ ಬೇರೆ. ನೀವು ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟು ಹೋಗಿ, ಇಲ್ಲಾಂದರೆ ಬಿಸಿಸಿಐ ಇವರನ್ನು ತೆಗೆದುಹಾಕುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

ಒಟ್ಟಿನಲ್ಲಿ ಗೌತಮ್​ ಗಂಭೀರ್​ ವಿರುದ್ಧ ಕ್ರೀಡಾಭಿಮಾನಿಗಳು ಮುಗಿಬಿದ್ದಿದ್ದು, ಇವರು ಭಾರತ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದಿಲ್ಲ ಎಂದು ಹೇಳಿದ್ದಾರೆ. ಈ ಎಲ್ಲಾ ಟೀಕೆಗಳಿಗೆ ಗೌತಿ ಮುಂದಿನ ದಿನಗಳಲ್ಲಿ ಹೇಗೆ ಉತ್ತರಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.

Share This Article

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…