ಜನಸಂಖ್ಯೆ ಏರಿಕೆಯಿಂದ ಸಂಪನ್ಮೂಲ ಕೊರತೆ

ಕೋಲಾರ: ಪ್ರಪಂಚದಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ಎಂಬ ಕೀರ್ತಿಗೆ ಹಾಗೂ ಅಪಕೀರ್ತಿಗೆ ಒಳಗಾಗಿರುವುದು ನಮ್ಮ ದೇಶ ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಜನಸಂಖ್ಯೆ 144 ಕೋಟಿಯಿದ್ದು, ಇದರಲ್ಲಿ ಶೇ.17 ರಿಂದ 76 ಜನಸಂಖ್ಯೆಯು ಪ್ರಪಂಚದಾದ್ಯಂತ ಹರಡಿದೆ. ಚೀನಾವನ್ನು ಹಿಂದಿಕ್ಕಿ ಬೆಳೆಯುತ್ತಿರುವ ನಮ್ಮ ಜನಸಂಖ್ಯೆ ಗುಣಾತ್ಮಕ ಮಾನವ ಸಂಪನ್ಮೂಲವಾಗಿ ಬದಲಾಗಿಲ್ಲ. ಈಗ ದೇಶದಲ್ಲಿ 18 ರಿಂದ 40 ವರ್ಷ ವಯೋಮಾನ ಪೀಳಿಗೆಯುವರು ಹೆಚ್ಚಾಗಿದ್ದ ಅವರನ್ನು ಕ್ರಿಯಾಶೀಲರಾದ ಗುಣಾತ್ಮಕ ಸಂಪನ್ಮೂಲವನ್ನಾಗಿ ಪರಿವರ್ತಿಸಲು ಉತ್ತಮ ಶಿಕ್ಷಣ, ಕೌಶಲ್ಯ, ಬಡತನ ನಿವಾರಣೆ, ವಸತಿ, ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆಗ ಮಾತ್ರ ಭಾರತದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಬಲ್ಲದು ಎಂದರು.
ಜನಸಂಖ್ಯೆ ಗುಣಾತ್ಮಕ ಬೆಳವಣಿಗೆ ಬಗ್ಗೆ ಪ್ರತಿಯೊಬ್ಬರು ಜಾಗೃತಿ ಮೂಡಿಸಬೇಕು. ಇತ್ತೀಚಿಗೆ ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿಯರು ಹೆಚ್ಚಾಗುತ್ತಿದ್ದಾರೆ. ಕಾರಣ ಶಿಕ್ಷಣವಿಲ್ಲದೇ ಇರುವುದು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿಲ್ಲದೇ ಇದ್ದಾಗ ತಾಯಿ ಮತ್ತು ಮಗು ಅಪೌಷ್ಟಿಕವಾಗಿರುತ್ತಾರೆ ಎಂದರು.
ವಿದ್ಯಾರ್ಥಿ ಜೀವನದಲ್ಲಿ ಆಚಾರ-&ವಿಚಾರ ಮತ್ತು ಸಂಸ್ಕಾರ ಅಳವಡಿಸಿಕೊಂಡು ಉತ್ತಮ ಪ್ರಜೆಯಾಗಿ ಸಮಾಜದಲ್ಲಿ ಬದುಕಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಹಲವು ಯೋಜನೆಗಳಿದ್ದು, ಇದರ ಸದುಪಯೋಗ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು. ಜನಸಂಖ್ಯೆ ನಿಯಂತ್ರಿಸಿ ದೇಶವು ಅಭಿವೃದ್ಧಿಯತ್ತ ಸಾಗಲು ಯುವಜನರು ಜವಾಬ್ದಾರಿಯಿಂದ ವರ್ತಿಸಬೇಕೆಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎ.ವಿ.ನಾರಾಯಣಸ್ವಾಮಿ, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ ಇದ್ದರು.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…