More

    ಎಲ್ಲರೂ ಮಹಿಳೆಯರನ್ನು ಗೌರವಿಸಿ

    ಚಿಕ್ಕೋಡಿ: ಆರೋಗ್ಯವಂತ ಸಮಾಜ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ. ದೇಶದ ಅಭಿವೃದ್ಧಿಯಲ್ಲಿ ಜನರ ಆರೋಗ್ಯ ಸಹ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.

    ಪಟ್ಟಣದ ಕೆಎಲ್‌ಇ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ, ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಶದ ಪ್ರತಿ ಬಡ ಮಹಿಳೆಗೆ ಆರೋಗ್ಯ ಸೌಲಭ್ಯ ಸಿಗಲಿ ಎಂಬ ಉದ್ದೇಶದಿಂದ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಈ ಶಿಬಿರ ಆಯೋಜಿಸಿದೆ. ಲಾಭ ಪಡೆಯಬೇಕು ಎಂದರು. ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಹೆಂಡತಿಯಾಗಿ ಇಡೀ ಮನೆತನ ಮತ್ತು ಸಮಾಜದ ಜವಾಬ್ದಾರಿ ನಿರ್ವಹಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾಳೆ. ಪ್ರತಿಯೊಬ್ಬರೂ ಆಕೆಗೆ ಗೌರವ ನೀಡಬೇಕು ಎಂದರು.

    ರಾಷ್ಟೀಯ ಸ್ವಯಂ ಸೇವಕ ಸಂಘದ ಬೆಳಗಾವಿ ವಿಭಾಗದ ಸಹ ಕಾರ್ಯವಾಹ ಸಂಜಯ ಅಡಕೆ ಮಾತನಾಡಿದರು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಉಪಾದ್ಯಕ್ಷ ಜಗದೀಶ ಕವಟಗಿಮಠ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ಚಿಕ್ಕೋಡಿ-ಸದಲಗಾ ಬಿಜೆಪಿ ಮಂಡಳ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ- ಸದಲಗಾ ಬಿಜೆಪಿ ಮಹಿಳಾ ಮಂಡಳ ಅಧ್ಯಕ್ಷೆ ಶಕುಂತಲಾ ದೋಣವಾಡೆ, ಜಿಪಂ ಮಾಜಿ ಸದಸ್ಯ ಹಾಗೂ ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ಪುರಸಭೆ ಸದ್ಯಸರಾದ ವೀಣಾ ಕವಟಗಿಮಠ, ಸುಮಾ ಗಾವಿ, ಆಶಾ ಪಾಟೀಲ, ಆಸ್ಪತ್ರೆಯ ಮುಖ್ಯವೈದ್ಯಕೀಯ ಅಧಿಕಾರಿ ಡಾ.ಧೀರಜ ಪೋಳ್, ಡಾ.ತಿರುಮಲ, ಡಾ.ಪ್ರಿಯಂಕಾ ಪಾಟೀಲ, ಡಾ.ಸೈದಾಪುರ ಆಡಳಿತಾಧಿಕಾರಿ ಪ್ರಶಾಂತ ಪೂಜಾರಿ, ವೈದ್ಯರಾದ ಡಾ.ಸೌಮ್ಯಾ ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು. ಶಿಬಿರದಲ್ಲಿ 150ಕ್ಕೂ ಅಧಿಕ ರೋಗಿಗಳನ್ನು ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts