More

    ನೊಂದವರಿಗೆ ನ್ಯಾಯ ಕಲ್ಪಿಸಿದರೆ ಕಾನೂನಿಗೆ ಗೌರವ

    ಶಿವಮೊಗ್ಗ: ಕಾನೂನುಗಳ ಕುರಿತು ತರಬೇತಿ ಪಡೆದಂತೆ ಅದನ್ನು ಅನುಷ್ಠಾನಕ್ಕೆ ತಂದು ನೊಂದವರಿಗೆ ನ್ಯಾಯ ಒದಗಿಸಿದರೆ ಕಾನೂನುಗಳಿಗೆ ಗೌರವ ನೀಡದಂತಾಗುತ್ತದೆ ಎಂದು ಎಎಸ್ಪಿ ಅನಿಲ್‌ಕುಮಾರ್ ಭೂಮರಡ್ಡಿ ಹೇಳಿದರು.

    ಬಾಲನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ, ಬಾಲ ಕಾರ್ಮಿಕ ಕಾಯ್ದೆ, ಭಿಕ್ಷಾಟನೆ, ಕೋಟ್ಪಾ ಮುಂತಾದವುಗಳ ಬಗ್ಗೆ ಪೊಲೀಸ್ ಸಿಬ್ಬಂದಿ, ವೈದ್ಯರು, ಶುಶ್ರೂಶಕಿಯರು, ಸ್ವಯಂ ಸೇವಾ ಸಂಸ್ಥೆಗಳ ಪ್ರಮುಖರಿಗೆ ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಜವಾಬ್ದಾರಿ ನಿರ್ವಹಣೆಯಲ್ಲಿ ಯಾರೂ ಹಿಂಜರಿಯಬಾರದು. ಮಕ್ಕಳ ಮನಸ್ಸು ಸೂಕ್ಷ್ಮವಾಗಿರುತ್ತದೆ. ಅದನ್ನು ಅರಿತು ಅವರಿಗೆ ಕಾನೂನಿನ ರಕ್ಷಣೆ ನೀಡಬೇಕು. ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಹೆಣ್ಣು ಮಕ್ಕಳ ವಿಷಯದಲ್ಲಿ ಕೆಲವು ಪ್ರಕರಣಗಳು ಸೂಕ್ಷ್ಮ ಮತ್ತು ಸಂವೇದನಾಶೀಲವಾಗಿರುತ್ತವೆ ಎಂದು ತಿಳಿಸಿದರು.
    ಜವಾಬ್ದಾರಿಗಳ ಜೊತೆ ನಾವು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿ ಅಗತ್ಯ ಕಾನೂನು ಕಾಯ್ದೆಗಳ ಕುರಿತು ಇಂತಹ ತರಬೇತಿ ಕಾರ್ಯಾಗಾರಗಳ ಮೂಲಕ ತಿಳಿದುಕೊಂಡು ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
    ಡಿಎಚ್‌ಒ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ, ಮಕ್ಕಳ ರಕ್ಷಣೆಯಲ್ಲಿ ಆರೋಗ್ಯ ಇಲಾಖೆ ಪಾತ್ರ ಮುಖ್ಯವಾಗಿದೆ. ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ಬಂದಾಗ ಸಾಮಾಜಿಕ ತುರ್ತು ಸೇವೆ ಎಂದು ಪರಿಗಣಿಸಿ ಸಂತ್ರಸ್ತರಿಗೆ ಸ್ಪಂದಿಸಬೇಕು ಎಂದು ಹೇಳಿದರು.
    ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ., ಸಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಸಿದ್ದನಗೌಡ ಪಾಟೀಲ್, ಡಿವೈಎಸ್ಪಿ ಬಾಬು ಅಂಜನಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts