More

    ತಕ್ಷಣವೇ ಸ್ಪಂದಿಸಿ ಪರಿಹಾರ ವಿತರಿಸಿ: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

    ಮೈಸೂರು: ರಾಜಕಾರಣ ಮಾಡದೆ ಮಳೆ ಅನಾಹುತಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಪರಿಹಾರ ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದರು.
    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಳೆ ಹಾನಿ ಕುರಿತ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ಮನೆ ಹಾನಿ ಪರಿಹಾರ ವಿತರಣೆಯಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು.


    ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳು ಪರಿಹಾರ ವಿತರಣೆಯಲ್ಲಿ ರಾಜಕಾರಣ ಮಾಡಬಾರದೆಂದು ತಾಕೀತು ಮಾಡಿದರು. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರತಿಕ್ರಿಯಿಸಿ, ಮನೆ ಹಾನಿಗೆ ಕಡ್ಡಾಯವಾಗಿ ಪರಿಹಾರ ವಿತರಿಸಲಾಗುತ್ತದೆ ಎಂದರು.

    ಜಿಲ್ಲೆಯಲ್ಲಿ 321 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಮತ್ತು 384 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. 19 ಜಾನುವಾರು, ತಿ.ನರಸೀಪುರ ಪೌಲ್ಟ್ರಿಯಲ್ಲಿ 2500 ಕೋಳಿಗಳು ಮೃತಪಟ್ಟಿದ್ದು, ಪರಿಹಾರ ವಿತರಿಸಲಾಗಿದೆ ಎಂದು ಡಿಸಿ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts