More

    ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ; ಕುಂದುಕೊರತೆಗಳಿಗೆ ಸ್ಪಂದಿಸಿ ಪರಿಹರಿಸಿ

    ಧಾರವಾಡ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದ ವ್ಯಕ್ತಿಗಳ ವೈಯಕ್ತಿಕ ಸಮಸ್ಯೆ ಮತ್ತು ಸಮುದಾಯದ ಕುಂದುಕೊರತೆಗಳಿಗೆ ಸ್ಪಂದಿಸಿ ಪರಿಹರಿಸಬೇಕು. ಸರ್ಕಾರದ ಹಂತದಲ್ಲಿ ಕ್ರಮ ಅಗತ್ಯವಿದ್ದರೆ ವರದಿಯೊಂದಿಗೆ ಶಿಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
    ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರ ಕುಂದುಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು.
    ಎಲ್ಲ ತಹಸಿಲ್ದಾರರು ಪ್ರತಿ 3 ತಿಂಗಳಿಗೊಮ್ಮೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರ ಕುಂದುಕೊರತೆಗಳ ಸಭೆಯನ್ನು ತಾಲೂಕು ಮಟ್ಟದಲ್ಲಿ ಜರುಗಿಸಬೇಕು ಎಂದರು.
    ಹುಬ್ಬಳ್ಳಿಯ ರಾಜಗೋಪಾಲ ನಗರದ ಖಾಸಗಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕ, ಕುಡಿಯುವ ನೀರು ವ್ಯವಸ್ಥೆ ಮತ್ತು ಸಂಸ್ಥೆಯ ಹೆಸರು ತಿದ್ದುಪಡಿ ಕುರಿತು ಶಿವಶಂಕರ ಭಂಡಾರಿ ಮನವಿ ಸಲ್ಲಿಸಿದರು. ಪರಿಶೀಲಿಸಿ ತಕ್ಷಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
    ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಮಾತನಾಡಿ, ಆಶ್ರಯ ಹಾಗೂ ವಿವಿಧ ವಸತಿ ಯೋಜನೆ ಮನೆಗಳ ಕುರಿತು ಸಮೀಕ್ಷೆ ಮಾಡಲಾಗಿದೆ. ಬಾಡಿಗೆದಾರರು, ಮಾಲೀಕರು, ಬೀಗ ಹಾಕಿದ ಮನೆಗಳು ಮತ್ತು ಮಾರಾಟ ಮಾಡಿದ ಮನೆಗಳ  ಸಮೀಕ್ಷಾ ವರದಿ ತಯಾರಿಸಿ ಜಿಲ್ಲಾಡಳಿತ ಹಾಗೂ ಸಚಿವರಿಗೆ ಸಲ್ಲಿಸಲಾಗುವುದು ಎಂದರು.
    ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ಧನಗೌಡರ ವೇದಿಕೆಯಲ್ಲಿದ್ದರು. ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕ ಅಲ್ಲಾಭಕಾಷ ಎಂ.ಎಸ್. ನಿರ್ವಹಿಸಿದರು.
    ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮೀಣ ಮತ್ತು ನಗರಗಳ ದಲಿತ ಸಂಘಟನೆಗಳ ಪ್ರತಿನಿಧಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts