More

    ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪಕ್ಷ ಸಂಘಟಿಸಿ

    ಶೃಂಗೇರಿ: ಪಕ್ಷ ಸಂಘಟನೆಯೇ ಮುಖ್ಯ ಧ್ಯೇಯವಾಗಬೇಕು. ಜತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಲು ಶ್ರಮಿಸಬೇಕು ಎಂದು ಶೃಂಗೇರಿ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ದಿವಾಕರ್ ಭಟ್ ಭಂಡಿಗಡಿ ತಿಳಿಸಿದರು.

    ಪಕ್ಷದ ಕಚೇರಿಯಲ್ಲಿ ಭಾನುವಾರ ತಾಲೂಕು ಜೆಡಿಎಸ್ ಘಟಕ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಚುನಾವಣೆ ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸುವುದು ಹಾಗೂ ಜನರ ಪ್ರೀತಿ, ವಿಶ್ವಾಸ ಗಳಿಸುವುದು ನಮ್ಮ ಪ್ರಮುಖ ಗುರಿ ಎಂದರು.
    ರಾಜ್ಯ ಜೆಡಿಎಸ್‌ನಿಂದ ಹಿಡಿದು ತಾಲೂಕು ಘಟಕದ ತನಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಶೃಂಗೇರಿ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾಗಿ ಭರತ್ ಗಿಣಕಲ್ ಆಯ್ಕೆಯಾಗಿದ್ದಾರೆ. ಪಕ್ಷ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವ ವಿಶ್ವಾಸವಿದೆ ಎಂದು ಹೇಳಿದರು.
    ತಾಲೂಕು ಜೆಡಿಸ್ ಘಟಕದ ಅಧ್ಯಕ್ಷ ಭರತ್ ಗಿಣಕಲ್ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಾ. ಸುಧಾಕರ ಶೆಟ್ಟಿ ಅವರು ಹೆಚ್ಚಿನ ಮತಗಳನ್ನು ಗಳಿಸಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಅವರು ಲೋಕಸಭೆಗೆ ಸ್ಪರ್ಧಿಸಬೇಕು ಎಂಬ ಪಕ್ಷದ ನಿರ್ಧಾರವನ್ನು ವರಷ್ಠರಿಗೆ ತಿಳಿಸಿದ್ದೇವೆ. ನಮ್ಮ ಪಕ್ಷದ ಕುರಿತು ಅನ್ಯಪಕ್ಷದವರು ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಇದಕ್ಕೆ ಮುಂದಿನ ದಿನಗಳಲ್ಲಿ ಪಕ್ಷ ತಕ್ಕ ಉತ್ತರ ನೀಡಲಿದೆ ಎಂದರು.
    ಅಧಿಕಾರ ಯಾರಿಗೂ ಶಾಶ್ವತವಲ್ಲ. ದೊರೆತ ಜವಾಬ್ದಾರಿಯನ್ನು ನಾವೆಲ್ಲರೂ ಒಗ್ಗೂಡಿ ನಿಭಾಯಿಸಬೇಕಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕುರಿತು ನಮಗೆ ಹೈಕಮಾಂಡ್‌ನಿಂದ ಯಾವುದೇ ಆದೇಶ ಬಂದಿಲ್ಲ. ಉತ್ತಮ ಕೆಲಸ ಮಾಡುವ ಮೂಲಕ ಜೆಡಿಎಸ್ ಗೆಲುವಿನ ಜತೆಗೆ ಪಕ್ಷಕ್ಕೆ ಚೈತನ್ಯ ತಂಬುವ ಕಾರ್ಯಕ್ಕೆ ಮಹತ್ವ ನೀಡಬೇಕಿದೆ. ಅದಕ್ಕಾಗಿ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಬೇಕು ಎಂದರು.
    ಶೃಂಗೇರಿ ತಾಲೂಕು ಜೆಡಿಎಸ್ ನೂತನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಮೆಣಸೆ, ಮಾಜಿ ಅಧ್ಯಕ್ಷರಾದ ವಿವೇಕಾನಂದ ಸುಂಕುರ್ಡಿ, ಜಿಲ್ಲಾ ಕಾರ್ಯದರ್ಶಿ ಜಿ.ಜಿ.ಮಂಜುನಾಥ್, ಮುಖಂಡರಾದ ಮಲ್ಲೇಶ್, ಆನಂದಸ್ವಾಮಿ, ಪಟ್ಟಣ ಘಟಕದ ಅಧ್ಯಕ್ಷ ಚಂದ್ರಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts