ಬೆಂಗಳೂರು: ಸರ್ಕಾರಿ ನೌಕರರಿಗೆ ನೀಡುತ್ತಿರುವ “ಕರ್ನಾಟಕ ಆರೋಗ್ಯ ಸಂಜೀವಿನಿ’ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್ ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ,ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತ್ರಾಜ್ ಬುಧವಾರ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದರು.
ದೇವಸ್ಥಾನದ ಜಮೀನನ್ನು ಅರ್ಚಕರು ಅಕ್ರಮವಾಗಿ ಖಾತೆ:ಗ್ರಾಮಸ್ಥರಿಂದ ಪ್ರತಿಭಟನೆ
ನಮ್ಮ ಸಮಸ್ಯೆಗಳಿಗೆ ಕಾರ್ಯದರ್ಶಿಯವರು ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ, ಅವರಿಗೆ ಧ್ಯನವಾದ ಸಲ್ಲಿಸುವುದಾಗಿ ಪದಾಧಕಾರಿಗಳು ಹೇಳಿದರು. ಇದಕ್ಕೂ ಮುನ್ನ ವೃಂದ ಮತ್ತು ನೇಮಕಾತಿ(ಸಿ ಆ್ಯಂಡ್ ಆರ್) ನಿಯಾಮವಳಿಗೆ ತಿದ್ದುಪಡಿ,ಪಾಲಿಕೆ ನೌಕರರಿಗೆ ಆರೋಗ್ಯ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಸರ್ಕಾರಕ್ಕೆ 30 ದಿನ ಗುಡುವು ನೀಡಿದೆ.