

ಬೆಂಗಳೂರು: ಕರೊನಾ ನಿಯಂತ್ರಣ ಉಸ್ತುವಾರಿ ವಿಚಾರದಲ್ಲಿ ಸಚಿವರ ನಡುವಿನ ಮುಸುಕಿನ ಗುದ್ದಾಟಕ್ಕೆ ಬ್ರೇಕ್ ಹಾಕಲು ಸಿಎಂ ಬಿ.ಎಸ್. ಯಡಿಯೂರಪ್ಪ ತಂತ್ರ ರೂಪಿಸಿದ್ದಾರೆ.
ಪೈಪೋಟಿಗೆ ಬಿದ್ದವರಂತೆ ಸಚಿವರ ಬಹಿರಂಗ ಹೇಳಿಕೆಗಳಿಂದಾಗಿ ಮುಜುಗರಕ್ಕೆ ಸಿಲುಕಿದ್ದ ಸಿಎಂ, ಮೂವರು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಜವಾಬ್ದಾರಿ ವಹಿಸಿದ್ದಾರೆ ಎಂಬುದರ ಡಿಟೇಲ್ಸ್ ಇಲ್ಲಿದೆ ನೋಡಿ. ಇದನ್ನೂ ಓದಿರಿ ಪೊಲೀಸ್ ಠಾಣೆಗೇ ‘ಬೇಡಿ’ ಹಾಕಿದ್ರು! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…
ಕರೊನಾ ನಿಗ್ರಹಕ್ಕೆ ಸಂಬಂಧಿಸಿದ ಎಲ್ಲ ನೀತಿ ನಿರೂಪಣೆ, ಮಾರ್ಗಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್ ರೂಮ್ ಜವಾಬ್ದಾರಿಯನ್ನು ಸಚಿವ ಡಾ. ಕೆ. ಸುಧಾಕರ್ಗೆ ವಹಿಸಲಾಗಿದೆ. ಕೋವಿಡ್ ಕೇರ್ ಸೆಂಟರ್ಗಳ ಸ್ಥಾಪನೆ ಮತ್ತು ನಿರ್ವಹಣೆ ಹೊಣೆಗಾರಿಕೆಯನ್ನು ಡಿಸಿಎಂ ಅಶ್ವತ್ಥನಾರಾಯಣಗೆ ನೀಡಲಾಗಿದೆ.
ಇನ್ನು ಖಾಸಗಿ ಆಸ್ಪತ್ರೆಗಳ ನಿರ್ವಹಣೆ, ಖಾಸಗಿ ಆಸ್ಪತ್ರೆಯಲ್ಲಿ ಹಾಸಿಗೆ ವ್ಯವಸ್ಥೆ, ಚಿಕಿತ್ಸೆ ನಿರಾಕರಿಸದಂತೆ ಎಚ್ಚರಿಕೆ ವಹಿಸುವ ಜವಾಬ್ದಾರಿಯನ್ನು ಆರ್. ಅಶೋಕ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಅವರಿಗೆ ಕೊಡಲಾಗಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಜವಾಬ್ದಾರಿ ಏನು ಎಂಬುದನ್ನು ಮಾತ್ರ ಹೇಳಿಲ್ಲ.
ಇದನ್ನೂ ಓದಿರಿ ವಿಭೂತಿ ಹಚ್ಚಿದರೆ ಕರೊನಾ ಬರಲ್ಲ!
ಶನಿವಾರ ಟಾಸ್ಕ್ಪೋರ್ಸ್ ಸಭೆ ನಡೆಸಿದ ಯಡಿಯೂರಪ್ಪ, ಕರೊನಾ ನಿಯಂತ್ರಣ ವಿಚಾರದಲ್ಲಿ ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ ಪಾರದರ್ಶಕ ರೀತಿಯಲ್ಲಿ ಕಾರ್ಯಾಚರಿಸಬೇಕು. ಸಚಿವರು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಸಚಿವರಿಗೆ ಸೂಚಿಸಿದ್ದಾರೆ. ಸೋಂಕು ಹೆಚ್ಚಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್ಡೌನ್ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.