More

    ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗೆ ಸ್ಪಂದನೆ

    ಶಿವಮೊಗ್ಗ: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದೆ. ಶ್ರೀನಿವಾಸಾಚಾರಿ ಸಮಿತಿ ವರದಿ ಅನ್ವಯ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

    ವೇತನ ಹೆಚ್ಚಳದ ಬಗ್ಗೆ ನೌಕರರಲ್ಲಿ ಗೊಂದಲದ ಅಗತ್ಯವಿಲ್ಲ. 3ರಿಂದ 5 ವರ್ಷ ಸೇವೆ ಸಲ್ಲಿಸಿದವರಿಗೆ ಶೇ.5, 5-10 ವರ್ಷ ಸೇವೆ ಸಲ್ಲಿಸಿದವರಿಗೆ ಶೇ.10ರಷ್ಟು ಹಾಗೂ 10 ವರ್ಷ ಮೇಲ್ಪಟ್ಟ ಸೇವೆಗೆ ಶೇ.15ರಷ್ಟು ವೇತನ ಹೆಚ್ಚಳವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಈ ಮಾನದಂಡಗಳು ತಜ್ಞ ವೈದ್ಯರಿಗೆ ಮಾತ್ರ ಅನ್ವಯವಾಗುತ್ತದೆ. 5 ವರ್ಷ ಪೂರೈಸಿದ ಎಂಬಿಬಿಎಸ್, ಆಯುಷ್, ದಂತ ವೈದ್ಯರಿಗೆ ಶೇ.15ರಷ್ಟು ವೇತನ ಹೆಚ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
    ಎನ್‌ಆರ್‌ಎಚ್‌ಎಂ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಮಾತನಾಡಿ, ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ, 60 ವರ್ಷಗಳವರೆಗೆ ಸೇವಾಭದ್ರತೆ, ವಿಮೆ, ಕೃಪಾಂಕ ಹೆಚ್ಚಳ ಮತ್ತು ಬಹುದಿನಗಳ ಬೇಡಿಕೆಯಾದ ಸಮಾನ ಕೆಲಸಕ್ಕೆ ಸಮಾನ ವೇತನ ಈಡೇರಿಸುವಂತೆ ಸಿಎಂ ಬಳಿ ಮನವಿ ಮಾಡಿರುವುದಾಗಿ ಹೇಳಿದರು. ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಉಪ್ಪಾರ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts