ನವದೆಹಲಿ: ಟೀಮ್ ಇಂಡಿಯಾ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ಗೆ ಮುಂಬರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಕ್ರಿಕೆಟ್ ಸರಣಿಯಿಂದ ವಿಶ್ರಾಂತಿ ನೀಡಲಾಗುತ್ತದೆ. ಆದರೆ ಫೆ.19ರಿಂದ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಸ್ಥಾನ ಕಲ್ಪಿಸಲಾಗುತ್ತದೆ ಎಂದು ವರದಿಯಾಗಿದೆ.
ಆಸ್ಟ್ರೆಲಿಯಾದಲ್ಲಿ ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎಲ್ಲ 5 ಪಂದ್ಯಗಳಲ್ಲಿ ಆಡಿರುವ ರಾಹುಲ್, ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಯಾವುದೇ ಪಂದ್ಯ ಆಡುವುದಿಲ್ಲ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಅವರು ಪ್ರಮುಖ ಸದಸ್ಯರಾಗಿರುತ್ತಾರೆ ಎನ್ನಲಾಗಿದೆ.
ರಾಹುಲ್ ಇಂಗ್ಲೆಂಡ್ ವಿರುದ್ಧ ಸರಣಿಯಿಂದ ವಿಶ್ರಾಂತಿ ಕೇಳಿದ್ದಾರೆ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಲಭ್ಯರಿರುವುದಾಗಿ ತಿಳಿಸಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ರಾಹುಲ್ ಈಗಾಗಲೆ ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಕ್ರಿಕೆಟ್ ಟೂರ್ನಿಯ ನಾಕೌಟ್ ಪಂದ್ಯಗಳಿಗೆ ಕರ್ನಾಟಕ ತಂಡದಿಂದಲೂ ವಿಶ್ರಾಂತಿ ಕೇಳಿದ್ದರು. ಆದರೆ ಜನವರಿ 23ರಿಂದ ನಡೆಯಲಿರುವ ರಣಜಿ ಟ್ರೋಫಿ 2ನೇ ಹಂತದ ಪಂದ್ಯಗಳಿಗೆ ಲಭ್ಯರಾಗುವರೇ ಎಂಬುದು ಸ್ಪಷ್ಟವಿಲ್ಲ.
ಖೋಖೋ ವಿಶ್ವಕಪ್ಗೆ ಕರ್ನಾಟಕದ ಗೌತಮ್, ಚೈತ್ರಾ ಆಯ್ಕೆ; ಪ್ರತಿಕ್, ಪ್ರಿಯಾಂಕಾಗೆ ಭಾರತ ತಂಡದ ಸಾರಥ್ಯ