More

    ಸೆಪ್ಟೆಂಬರ್ 2024ರೊಳಗೆ ಜಮ್ಮು ಕಾಶ್ಮೀರದಲ್ಲಿ ಎಲೆಕ್ಷನ್‌ ನಡೆಸಿ: ಸುಪ್ರೀಂ ಕೋರ್ಟ್

    ನವದೆಹಲಿ: ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು 2024 ಸೆಪ್ಟೆಂಬರ್ 30ರ ಮೊದಲು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.

    ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಸಂವಿಧಾನ ಪೀಠ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿದಿದೆ. ಜಮ್ಮು ಮತ್ತು ಕಾಶ್ಮೀರ ಯಾವುದೇ ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ ಮತ್ತು 370 ನೇ ವಿಧಿಯು ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

    2024 ರ ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆಗಳನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ನಿರ್ದೇಶಿಸುತ್ತೇವೆ ಎಂದು ಆರ್ಟಿಕಲ್ 370 ರದ್ದು ತೀರ್ಪು ನೀಡುವ ವೇಳೆ ಸಿಜೆಐ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಆಗಸ್ಟ್ 2019 ರಲ್ಲಿ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ರಚಿಸುವ ನಿರ್ಧಾರದ ಸಿಂಧುತ್ವವನ್ನು ಸಹ ಎತ್ತಿಹಿಡಿದಿದೆ.

    ಇಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಶ್ಮೀರ ಕಣಿವೆಯಲ್ಲಿ ಭದ್ರತೆಯನ್ನು ಬಲಪಡಿಸಲಾಗಿತ್ತು. ಇನ್ನು, ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಬೇಕು ಎಂದು ಬಿಜೆಪಿ ಸಾಂವಿಧಾನಿಕ ಪೀಠದ ತೀರ್ಪನ್ನು ಸ್ವಾಗತಿಸಿ ಪ್ರತಿಕ್ರಿಯೆ ನೀಡಿದೆ.

    ಅಯೋಧ್ಯೆಯ ರಾಮಮಂದಿರದ ಅರ್ಚಕರಾಗಿ ಗಾಜಿಯಾಬಾದ್ ವಿದ್ಯಾರ್ಥಿ ಆಯ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts