

ಬೆಂಗಳೂರು: ನಾಗರಿಕರನ್ನು ಶೋಷಣೆಗೆ ಒಳಪಡಿಸುವ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಸ್ಥೆಗಳ ನಿಯಂತ್ರಣಕ್ಕೆ(Restrictions on private hospitals) ಮಾರ್ಗಸೂಚಿ ರೂಪಿಸಬೇಕು ಎಂದು ಕಾಂಗ್ರೆಸ್ನ ಬಲ್ಕಿಸ್ ಬಾನು(MLC Balkis Banu demands) ಆಗ್ರಹಿಸಿದರು.
ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆ ‘ಖಾಸಗಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಾಧ್ಯತೆ’ ವಿಜಯವಾಣಿ ವರದಿ ಉಲ್ಲೇಖಿಸಿ ಮಾತನಾಡಿದರು.
ಜನರನ್ನು ಶೋಷಣೆಗೆ ಒಳಪಡಿಸುವ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಮಾರ್ಗಸೂಚಿ ರಚಿಸುವಂತೆ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಸಂದರ್ಭದಲ್ಲಿ ಸುಪ್ರಿಂ ಕೋರ್ಟ್, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳನ್ನು ಸಂವೇದನಶೀಲಗೊಳಿಸುವುದು ಅಗತ್ಯ ಎಂದು ಹೇಳಿದೆ. ರಾಜ್ಯ ಸರ್ಕಾರದ ವೈಲ್ಯದಿಂದ ಖಾಸಗಿ ಆಸ್ಪತ್ರೆಗಳಿಗೆ ಅನುಕೂಲವಾಗಿದೆ. ಜನರನ್ನು ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದು ಅವಶ್ಯ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಕೂಡ ಮಾರ್ಗಸೂಚಿ ರೂಪಿಸಿ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.
ಬೇರೆ ಕಡೆ ಕಡಿಮೆ ಬೆಲೆಗೆ ದೊರೆಯುವ ಔಷಧಗಳನ್ನು ತಮ್ಮ ಔಷಧಾಲಯಗಳಿಂದಲೇ ಖರೀದಿಸಬೇಕು ಎಂದು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಕುಟುಂಬಸ್ಥರಿಎ ಒತ್ತಾಯಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಬಲ್ಕಿಸ್ ಬಾನು ಹೇಳಿದರು.