ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರ ಅನಿವಾರ್ಯವಾಗಿತ್ತು: DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ | Pahalgam Terror Attack

Lt Gen Rajiv Ghai
Published on

ದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ(Pahalgam Terror Attack) ಭಾರತದ ಪ್ರತೀಕಾರವು ಅನಿವಾರ್ಯವಾಗಿತ್ತು ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮಂಗಳವಾರ (ಅಕ್ಟೋಬರ್​,14) ಹೇಳಿದ್ದಾರೆ.

ಅಪರೇಷನ್​ ಸಿಂಧೂರ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಘಾಯ್, ಈ ದಾಳಿಯನ್ನು ಭಯೋತ್ಪಾದನೆ ವಿರುದ್ದವಾಗಿದೆ ಎಂದು ಬಣ್ಣಿಸಿದ್ದಾರೆ. ಇದರಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಆಚೆಯಿಂದ ಬಂದ ಭಯೋತ್ಪಾದಕರು 26 ಪ್ರವಾಸಿಗರನ್ನು ಗುರುತಿಸಿ ಅವರ ಸಮುದಾಯವನ್ನು ಆಧರಿಸಿ ಪ್ರತ್ಯೇಕಿಸಿ ಕುಟುಂಬಗಳ ಮುಂದೆ ಕ್ರೂರವಾಗಿ ಗುಂಡು ಹಾರಿಸಿ ಕೊಂದಿದ್ದರು ಎಂದು ತಿಳಿಸಿದ್ದಾರೆ.

ಮುಂದುವರೆದು ಮಾತನಾಡಿದ ಘಾಯ್​, ಈ ಘಟನೆಯು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಯಿತು. ಕಾಶ್ಮೀರದಾದ್ಯಂತ ಭದ್ರತಾ ಕಳವಳಗಳನ್ನು ಹೆಚ್ಚಿಸಿತು. ಅಲ್ಲದೆ, ಪಹಲ್ಗಾಮ್​ನಲ್ಲಿ ನಡೆದ ಈ ದಾಳಿಯು ಇತ್ತೀಚಿನ ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದೆಂದು ಬಣ್ಣಿಸಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆ ಅನಿವಾರ್ಯವಾಗಿತ್ತು ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ ನಾವು ನಮ್ಮ ಸಮಯವನ್ನು ತೆಗೆದುಕೊಂಡೆವು. ಅಲ್ಲದೆ, ಸೇನಾ ಮುಖ್ಯಸ್ಥರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಬಗ್ಗೆ ವಿವರಣೆ ನೀಡಿದೆವು ಎಂದು ಘಾಯ್​ ಎಂದಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತವು ಆಪರೇಷನ್ ಸಿಂಧೂರ ಅಡಿಯಲ್ಲಿ ನಡೆಸಿದ ಪ್ರತೀಕಾರದಲ್ಲಿ ಸಂಘಟಿತ ಮಿಲಿಟರಿ ಕ್ರಮಗಳು ಸೇರಿವೆ.

ಹೆಚ್ಚಿನ ಮೌಲ್ಯದ ಗುರಿಗಳನ್ನು ಆಯ್ಕೆ ಮಾಡುವಲ್ಲಿ ಮತ್ತು ತಟಸ್ಥಗೊಳಿಸುವಲ್ಲಿ ಅಂತರ್​ಸೇವಾ ಸಮನ್ವಯ ಮತ್ತು ಗುಪ್ತಚರ ಹಂಚಿಕೆ ಪ್ರಮುಖ ಪಾತ್ರ ವಹಿಸಿದೆ ಎಂದು ಡಿಜಿಎಂಒ ಹೇಳಿದ್ಧಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net