More

    ಕಾಂಗ್ರೆಸ್ ಸೇರುವ ಬದಲು ರಾಜಕೀಯ ನಿವೃತ್ತಿ

    ಚಿಕ್ಕಮಗಳೂರು: ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್‌ಗೆ ನಾನು ಮರಳುವುದಿಲ್ಲ. ರಾಜಕೀಯದಲ್ಲಿ ಇದ್ದರೆ ಅದು ಬಿಜೆಪಿಯಲ್ಲಿ ಮಾತ್ರ. ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ತಿಳಿಸಿದರು.
    ಕೆಲ ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ಮರಳುವಂತೆ ಮನವಿ ಮಾಡಿದ್ದರು. ಆದರೆ ನಾನು ಯಾವ ಕಾರಣಕ್ಕೂ ಕಾಂಗ್ರೆಸ್‌ಗೆ ಮರಳುವುದಿಲ್ಲ ಎಂದು ನಿಲುವು ಸ್ಪಷ್ಟಪಡಿಸಿದ್ದೇನೆ. ಆದರೂ ಪುಟ್ಟಸ್ವಾಮಿ ಕಾಂಗ್ರೆಸ್ ಸೇರುತ್ತಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
    ನಾನು ಬಿಜೆಪಿ ಜಿಲ್ಲಾ ವಕ್ತಾರನಾಗಿದ್ದರೂ ಪ್ರಿಯಾಂಕ್ ಖರ್ಗೆ ಅವರು ನನ್ನನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಗೊಂದಲ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಒಂದು ಕಾಲದಲ್ಲಿ ಕಾಂಗ್ರೆಸ್ ದೊಡ್ಡ ಮರವಾಗಿತ್ತು. ಆದರೆ ನೆಹರೂ, ಇಂದಿರಾಗಾಂಧಿ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡಿದ್ದರಿಂದ ಕಾಂಗ್ರೆಸ್ ಇಂದು ಒಣಗಿದ ಬಳ್ಳಿಯಾಗಿ ಅಸ್ತಿತ್ವ ಕಳೆದುಕೊಳ್ಳುವ ಹಂತದಲ್ಲಿದೆ. ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದಿಂದ ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಾದೇಶಿಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ ಎಂದರು.
    ಬಿಜೆಪಿ ಜಿಲ್ಲಾ ವಕ್ತಾರ ಲೋಕೇಶ್, ಪ್ರಮುಖರಾದ ರಾಜಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts