More

    ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ನಿಧನ; ಬಿಜೆಪಿ ಮುಖಂಡರ ಕಂಬನಿ

    ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಕೆ. ಶಿವರಾಂ ಅವರು ಗುರುವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದೀರ್ಘ ಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಬುಧವಾರ ಆರೋಗ್ಯದಲ್ಲಿ ಏರುಪೇರಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಲಕಾರಿಯಾಗದೆ ಗುರುವಾರ ಸಂಜೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ರಾಮನಗರ ಜಿಲ್ಲೆಯ ಉರಗಳ್ಳಿ ಎಂಬ ಚಿಕ್ಕ ಗ್ರಾಮದಲ್ಲಿ 1953ರಲ್ಲಿ ಜನಿಸಿದ್ದ ಶಿವರಾಂ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕೆಎಎಸ್ ಅಧಿಕಾರಿಯಾಗಿ ಸೇವೆ ಸೇರಿದ್ದ ಕೆ.ಶಿವರಾಂ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾಗಿದ್ದರು. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ, ವಿವಿಧ ಇಲಾಖೆಗಳ ಉನ್ನತ ಅಧಿಕಾರಿಯಾಗಿ ಸೇವೆ ಸಲ್ಲಸಿದ್ದರು.

    ಬಣ್ಣದ ಲೋಕದ ನಂಟು: ರಂಗಕರ್ಮಿಯಾಗಿದ್ದ ತಂದೆಯಿಂದ ಬಂದ ಬಣ್ಣದ ಬಳುವಳಿಯಲ್ಲಿ ಬೆಳ್ಳಿತೆರೆಯ ಮೂಲಕ ಅನಾವರಣಗೊಳಿಸಿದ್ದ ಶಿವರಾಂ ಅವರು ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದರು. ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರವು ಹೆಚ್ಚಿನ ಹೆಸರು ತಂದುಕೊಟ್ಟಿತ್ತು.

    ರಾಜಕೀಯಕ್ಕೆ ಪಾದಾರ್ಪಣೆ: ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರ ಕೆ.ಶಿವರಾಮ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡು ಈವರೆಗೆ ಬಿಜೆಪಿಯಲ್ಲಿಯೇ ಇದ್ದರು. ಹಿರಿಯ ನಾಯಕರೊಂದಿಗೆ ಒಡನಾಟ ಇರಿಸಿಕೊಂಡಿದ್ದ ಅವರು ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಛಲವಾದಿ ಮಹಾಸಭಾವನ್ನು ಹುಟ್ಟುಹಾಕಿ ಆ ಮೂಲಕ ಸಮುದಾಯ ಜನರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು.

    ಗಣ್ಯರ ಸಂತಾಪ : ನಿವೃತ್ತ ಐಎಎಸ್ ಅಧಿಕಾರಿ, ನಟ, ಬಿಜೆಪಿ ಮುಖಂಡ ಕೆ. ಶಿವರಾಂ ಅವರ ಅಗಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಮುಖಂಡರಾಗಿದ್ದ ಶಿವರಾಂ ಅವರು ದಕ್ಷ ಅಧಿಕಾರಿಯಾಗಿ ಪ್ರಸಿದ್ಧರಾಗಿದ್ದರು. ಅವರು ಅಗಲಿರುವುದು ತೀವ್ರ ದುಃಖಕರ ವಿಷಯವಾಗಿದ್ದು, ಅವರ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ಭಗವಂತ ನೀಡಲಿ ಎಂದು ಕೋರಿದ್ದಾರೆ.

    ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದು ಗುರುವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು. ಆದರೆ ಸಂಜೆ ವೇಳೆಗೆ ಶಿವರಾಂ ಕೊನೆಯುಸಿರೆಳೆದ ಸುದ್ದಿ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಕೆ.ಗೋಪಾಲಯ್ಯ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts