ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ(60) ಬುಧವಾರ ನಿಧನರಾಗಿದ್ದಾರೆ. ಕೊತ್ತನೂರು ಸಮೀಪ ದೊಡ್ಡಗುಬ್ಬಿಯ ಅಪಾರ್ಟ್‌ಮೆಂಟ್‌ನಲ್ಲಿ ಶರ್ಮಾ, ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ನೆಲೆಸಿದ್ದರು. ಪತ್ನಿ ಡಾ.ಎನ್. ನಾಗಾಂಬಿಕಾ ದೇವಿ ಹಿರಿಯ ಐಎಎಸ್ ಅಧಿಕಾರಿ ಆಗಿದ್ದಾರೆ.
ಕ್ಯಾನ್ಸರ್‌ಗೆ ತುತ್ತಾಗಿದ್ದ ಶರ್ಮಾ, ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದರ ನಡುವೆ 2020ರ ಸೆಪ್ಟೆಂಬರ್ 2ರಂದು ಮನೆಯಲ್ಲಿ ಸರ್ವಿಸ್ ರಿವಾಲ್ವರ್ ಸ್ವಚ್ಛ ಮಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದರು. ಬುಧವಾರ ಸಂಜೆ ಬಹು ಅಂಗಾಂಗ ವೈಫಲ್ಯದಿಂದ ಅಸುನೀಗಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಮಲತಾಯಿಯಿಂದಲೇ ಕೊಲೆಗೆ ಸುಪಾರಿ; ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಸಿದ್ಧಾರ್ಥ್ ಕೊಲೆ ಪ್ರಕರಣ, ಮಹಿಳೆಯ ಬಂಧನ..
ಉತ್ತರ ಪ್ರದೇಶ ಮೂಲದ ಡಾ.ರಾಜ್‌ವೀರ್ ಪ್ರತಾಪ್ ಶರ್ಮಾ ಅವರು ಎಂಬಿಬಿಎಸ್, ಎಲ್‌ಎಲ್‌ಬಿ, ಎಂಬಿಎ ಪದವಿ ಮುಗಿಸಿದ್ದರು. 1987ರಲ್ಲಿ ಯುಪಿಎಸ್‌ಸಿ ಉತ್ತೀರ್ಣರಾಗಿ ಕರ್ನಾಟಕ ಕ್ಯಾಡರ್ ಅಧಿಕಾರಿಯಾಗಿ ಪೊಲೀಸ್ ಸೇವೆ ಆರಂಭಿಸಿದ್ದರು. ರಾಜ್ಯ ಪೊಲೀಸ್ ಇಲಾಖೆಯಲ್ಲಿ ರೈಲ್ವೆ ಎಡಿಜಿಪಿ, ಬಿಎಂಟಿಎಫ್ ಮುಖ್ಯಸ್ಥ ಸೇರಿ ಹಲವು ಹುದ್ದೆಗಳನ್ನು ನಿಭಾಯಿಸಿ ರಾಜ್ಯ ಪೊಲೀಸ್ ಗೃಹ ಮಂಡಳಿ ಡಿಜಿಪಿಯಾಗಿ ಡಿಸೆಂಬರ್ 31ರಂದು ನಿವೃತ್ತರಾಗಿದ್ದರು. ಇವರ ಅಗಲಿಕೆಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
ಮಲತಾಯಿಯಿಂದಲೇ ಕೊಲೆಗೆ ಸುಪಾರಿ; ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಸಿದ್ಧಾರ್ಥ್ ಕೊಲೆ ಪ್ರಕರಣ, ಮಹಿಳೆಯ ಬಂಧನ..