ನಿವೃತ್ತ ಅಧಿಕಾರಿಗೆ ₹67 ಲಕ್ಷ ಧೋಖಾ

blank

ಬೆಂಗಳೂರು: ನಿವೃತ್ತ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿದ ಸೈಬರ್ ಕಳ್ಳರು ಬೆದರಿಸಿ 67.40 ಲಕ್ಷ ರೂ. ಸುಲಿಗೆ ಮಾಡಿದ್ದು, ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರ 9ನೇ ಹಂತದ 63 ವರ್ಷದ ನಿವೃತ್ತ ಅಧಿಕಾರಿ ವಂಚನೆಗೆ ಒಳಗಾದವರು. ಇವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏ.22ರಂದು ನಿವೃತ್ತ ಅಧಿಕಾರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಸಹಾರಾ ಪೊಲೀಸ್ ಠಾಣೆಯಿಂದ ಮಾತನಾಡುತ್ತಿದ್ದೇನೆ. ನಿಮ್ಮ ಆಧಾರ್, ಪಾನ್ ಕಾರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಹಣ ವಹಿವಾಟು ನಡೆದಿದ್ದು, ಮನಿಲಾಂಡಿರಿಂಗ್ ಕೇಸ್ ದಾಖಲಾಗಿದೆ. ಈ ಕೇಸ್ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ ವರ್ಗಾವಣೆಯಾಗಿದೆ. ಈ ಬಗ್ಗೆ ಸಿಬಿಐ ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿ ಕರೆನ್ನು ಮತ್ತೊಬ್ಬರಿಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಹೇಳಿ ಕರೆ ಸ್ಥಗಿತ ಮಾಡಲಾಗಿತ್ತು.

blank

ಕೆಲವೇ ನಿಮಿಷಕ್ಕೆ ಮತ್ತೊಬ್ಬ ಕರೆ ಮಾಡಿ, ಈ ಕೇಸಿನಲ್ಲಿ ನಿಮ್ಮನ್ನು ಅರೆಸ್ಟ್ ಮಾಡಬೇಕಿದೆ. ಆದರೆ, ನಿಮಗೆ ಸಹಾಯ ಮಾಡುತ್ತೆನೆ. ಈ ಬಗ್ಗೆ ಯಾರಿಗೂ ಹೇಳಬೇಡಿ. ಮೊದಲು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಎಲ್ಲ ಹಣವನ್ನು ಕೋರ್ಟ್ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕೆಂದು ಸೂಚಿಸಿದ್ದರು. ಬಂಧನ ಭೀತಿಯಿಂದ ನಿವೃತ್ತ ಅಧಿಕಾರಿ, ತಮ್ಮ ವಿವಿಧ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಆರೋಪಿಗಳು ಕೊಟ್ಟ ಖಾತೆಗೆ ಹಂತ ಹಂತವಾಗಿ 67.40 ಲಕ್ಷ ರೂ. ವರ್ಗಾವಣೆ ಮಾಡಿದ್ದರು.

ಮತ್ತಷ್ಟು ಹಣ ಬೇಕೆಂದು ಕೇಳಿದಾಗ ಅನುಮಾನ ಬಂದು ನಿವೃತ್ತ ಅಧಿಕಾರಿ, ಇಲ್ಲಿಯವರೆಗೂ ವರ್ಗಾವಣೆ ಮಾಡಿದ ಹಣ ವಾಪಸ್ ಕೊಡುವಂತೆ ಒತ್ತಾಯ ಮಾಡಿದಾಗ ಸಂಪರ್ಕ ಕಡಿತ ಮಾಡಿಕೊಂಡಿದ್ದರು. ನೊಂದ ನಿವೃತ್ತ ಅಧಿಕಾರಿ, ಈ ಬಗ್ಗೆ ಸಿಇಎನ್ ಠಾಣೆಗೆ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank