

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಇರುವ ತಮ್ಮ ಮನೆಯಲ್ಲಿ ಅಶೋಕ್ ಕುಮಾರ್ ನೇಣು ಹಾಕಿಕೊಂಡಿದ್ದು, ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅವರು 'ನನ್ನ ಸಾವಿಗೆ ನಾನೇ ಕಾರಣ' ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.