ರಾಮಕೃಷ್ಣ ಭಟ್ಟರು ಸುಪ್ತ ಮನಸ್ಸಿನ ಬಹುಮುಖ ಪ್ರತಿಭೆ ಅಭಿನಂದನಾ ಸಮಾರಂಭದಲ್ಲಿ ಲೇಖಕ ಪುಂಡಿಕಾಯಿ ಗಣಪಯ್ಯ ಭಟ್ ಹೇಳಿಕೆ

ಮಂಗಳೂರು: ಚೊಕ್ಕಾಡಿ ರಾಮಕೃಷ್ಣ ಭಟ್ಟರು ನಿವೃತ್ತರಾಗಿ ನಾಲ್ಕು ದಿನಗಳಲ್ಲಿ ಅಭಿನಂದನಾ ಗ್ರಂಥ ಬಿಡುಗಡೆಗೊಂಡಿರುವುದು ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಾಕ್ಷಿ. ಭಟ್ಟರು ಸುಪ್ತ ಮನಸ್ಸಿನ ಹಲವು ಮುಖಗಳನ್ನು ಹೊಂದಿರುವ ವಿಶೇಷ ಪ್ರತಿಭೆ ಎಂದು ಇತಿಹಾಸ ತಜ್ಞ, ಲೇಖಕ ಪುಂಡಿಕಾಯಿ ಗಣಪಯ್ಯ ಭಟ್ ಹೇಳಿದರು.


ಚೊಕ್ಕಾಡಿಯ ಶ್ರೀರಾಮ ದೇವಾಲಯದ ದೇಸೀ ಸಭಾಭವನದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಜೇಸಿಐ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ ಮತ್ತು ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು.
ಅಭಿನಂದನಾ ಸಮಿತಿ ಅಧ್ಯಕ್ಷ ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಸಾಹಿತಿ ಸುಬ್ರಾಯ ಚೊಕ್ಕಾಡಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದರು. ರಾಮಕೃಷ್ಣ ಅಭಿನಂದನಾ ಗ್ರಂಥ ಅವರ ಜೀವನದ ಸಾಧನೆಗಳ ದಾಖಲೆಯಾಗಿದೆ. ಅವರ ವ್ಯಕ್ತಿತ್ವದಲ್ಲಿ ರಾಮ ಮತ್ತು ಕೃಷ್ಣರ ಆದರ್ಶಗಳನ್ನು ಬೆಳೆಸಿಕೊಂಡಿದ್ದಾರೆ ಎಂದರು.


ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತು ಜೇಸಿಐ ಬೆಳ್ಳಾರೆ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅತಿಥಿಗಳಾಗಿ ಭಾಗವಹಿಸಿದ್ದರು. ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ರಾಮ ಪೆರುವಾಜೆ, ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಮತ್ತು ದ.ಕ. ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್ ಅಭಿನಂದನಾ ಮಾತುಗಳನ್ನಾಡಿದರು.


ಶ್ರೀರಾಮ ದೇವಾಲಯದ ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು ಸ್ವಾಗತಿಸಿ, ಡಾ. ಮುರಲೀಮೋಹನ್ ಚೂಂತಾರು ಪ್ರಸ್ತಾವಿಕ ಮಾತುಗಳನ್ನಾಡಿದರು. ಜೇಸಿಐ ಬೆಳ್ಳಾರೆ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ ವಂದಿಸಿದರು. ಪ್ರಕಾಶ್ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…