More

    ಹಿಟ್ ಆ್ಯಂಡ್ ರನ್ ಕಠಿಣ ಕಾನೂನು ವಾಪಸ್-ಬಿವೈಆರ್ ಭರವಸೆ

    ಶಿವಮೊಗ್ಗ: ಕೇಂದ್ರ ಸರ್ಕಾರ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಬಿಗಿ ಕಾನೂನು ಜಾರಿಗೊಳಿಸಿರುವುದನ್ನು ವಿರೋಧಿಸಿ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಲಾರಿ ಚಾಲಕರು ಎರಡನೇ ದಿನವಾದ ಗುರುವಾರವೂ ನಗರದಲ್ಲಿ ಮುಷ್ಕರ ಮುಂದುವರಿಸಿದರು. ಸ್ಥಳಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಚಾಲಕರ ಗೊಂದಲಗಳನ್ನು ದೂರ ಮಾಡಿದ ಬಳಿಕ ಮುಷ್ಕರದಿಂದ ಹಿಂದೆ ಸರಿಯುವುದಾಗಿ ಲಾರಿ ಚಾಲಕರು ಹಾಗೂ ಮಾಲೀಕರು ತಿಳಿಸಿದರು.

    ಕೇಂದ್ರ ಸರ್ಕಾರದ ಕಠಿಣ ಕಾಯ್ದೆಯಿಂದ ವಾಹನ ಚಾಲನೆ ಮಾಡುವುದಕ್ಕೆ ಹೆದರಿಕೆಯಾಗುತ್ತಿದೆ. ಏನಾದರೂ ಅಪಘಾತ ಸಂಭವಿಸಿದರೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದರಿಂದ ನಮ್ಮ ಕುಟುಂಬದವರೂ ಆತಂಕದಲ್ಲಿದ್ದಾರೆ. ದುಬಾರಿ ದಂಡವನ್ನು ಕಟ್ಟಲು ನಾವು ಮನೆ ಮಾರಾಟ ಮಾಡಬೇಕಾಗುತ್ತದೆ ಎಂದು ಲಾರಿ ಚಾಲಕರು ಅಳಲು ತೋಡಿಕೊಂಡರು.
    ಶಾಸಕ ಎಸ್.ಎನ್.ಚನ್ನಬಸಪ್ಪ ಜತೆ ಸ್ಥಳಕ್ಕೆ ಭೇಟಿ ನೀಡಿದ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಕೇಂದ್ರ ಸರ್ಕಾರ ಈಗಾಗಲೇ ತನ್ನ ನಿಲುವು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕಠಿಣ ಕಾನೂನು ಜಾರಿಗೆ ನಿರ್ಧರಿಸಿದ್ದು ನಿಜ. ಆದರೆ ದೇಶವ್ಯಾಪಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಚಾತುರ್ಯ ಅರ್ಥ ಮಾಡಿಕೊಂಡು ಕೂಡಲೆ ಕಾನೂನು ಹಿಂಪಡೆಯುವುದಾಗಿ ಘೋಷಣೆ ಮಾಡಿದೆ ಎಂದರು.
    ನಾನು ಈಗಾಗಲೇ ಅಧಿಕಾರಿಗಳೊಂದಿಗೆ ಈ ಸಂಬಂಧ ಮಾತನಾಡಿದ್ದೇನೆ. ಅವರಿಂದಲೂ ಸ್ಪಷ್ಟನೆ ದೊರೆತಿದೆ. ಕೆಲವು ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಯಿಂದ ಗೊಂದಲ ಉಂಟಾಗಿದೆ. ಹೀಗಾಗಿ ಲಾರಿ ಚಾಲಕರು ಹಾಗೂ ಮಾಲೀಕರು ಆತಂಕಪಡುವ ಅಗತ್ಯವಿಲ್ಲ. ನಾನು ನಿಮ್ಮೊಂದಿಗಿದ್ದೇನೆ ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts