More

    ಕಣ್ಣೀರು ಹಾಕಿದ ರೇವಣ್ಣ!

    ಬೆಂಗಳೂರು: ಲೈಂಗಿಕ ಹಗರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಶನಿವಾರ ರಾತ್ರಿ ಎಸ್‌ಐಟಿಗೆ ಕಚೇರಿಗೆ ಆಗಮಿಸುತ್ತಿದ್ದಂತೆ ಕಣ್ಣೀರು ಹಾಕಿದ್ದಾರೆ ಎಂದು ತಿಳಿದು ಬಂದಿದೆ.
    ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದ ನಿವಾಸದಲಿ ಬಂಧಿಸಿದ ವಿಶೇಷ ತನಿಖಾ ದಳ(ಎಸ್‌ಐಟಿ) ಅಧಿಕಾರಿಗಳು ಅಲ್ಲಿಂದ ನೇರವಾಗಿ ಅರಮನೆ ರಸ್ತೆಯಲ್ಲಿರುವ ಕಾರ್ಲಟನ್ ಭವನದ ಸಿಐಡಿ ಕಚೇರಿಗೆ ಬಿಗಿ ಭದ್ರತೆಯಲ್ಲಿ ಕರೆತಂದರು. ನಂತರ ರಾತ್ರಿ ೯ ಗಂಟೆಯ ವೇಳೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ರಾತ್ರಿ ೧೦ ಗಂಟೆಗೆ ಮತ್ತೆ ಸಿಐಟಿ ಕಚೇರಿಗೆ ಕರೆತರಲಾಯಿತು.
    ಸಿಐಡಿ ಕಚೇರಿಗೆ ಬರುತ್ತಿದಂತೆ ರೇವಣ್ಣ ಅವರು ನಡೆದ ಘಟನೆಗಳನ್ನು ನೆನೆಸಿಕೊಂಡು ಕಣೀರು ಹಾಕಿದ್ದಾರೆ ಎನ್ನಲಾಗಿದೆ. ಕೆಲಕಾಲ ಬೇಸರದಲ್ಲಿ ಕುಳಿತಿದ್ದ ರೇವಣ್ಣ ಅಧಿಕಾರಿಗಳು ನೀಡಿದ ಊಟ ಸೇವಿಸಿ ಬಳಿಕ ಸಿಐಡಿಯ ಕಚೇರಿಯ ಕೊಠಡಿಯೊಂದರಲ್ಲಿ ನಿದ್ರೆಗೆ ಜಾರಿದರು. ಬಳಿಕ ಭಾನುವಾರ
    ಬೆಳಗ್ಗೆ ೧೦ ಗಂಟೆಯಿಂದ ೧೨ ಗಂಟೆಯವರೆಗೆ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ.

    ಎಚ್‌ಡಿಡಿ ನಿವಾಸಕ್ಕೆ ಭದ್ರತೆ:
    ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ನಿವಾಸಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
    ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ರೇವಣ್ಣ ಬಂಧನದಿಂದ ಭಾವುಕರಾಗಿರುವ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ನಿವಾಸದ ಮುಂದೆ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ ರಾತ್ರಿಯಿಂದಲೇ ಪದ್ಮನಾಭನಗರದ ಎಚ್.ಡಿ.ದೇವೇಗೌಡರ ನಿವಾಸಿ ಮತ್ತು ಸದಾಶಿವನಗರದ ಡಿ.ಕೆ.ಸುರೇಶ್ ನಿವಾಸದ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರ ಜತೆಗೆ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಿ ಬಿಗಿ ಭದ್ರತೆ ನಡೆಸಿದ್ದಾರೆ. ಮತ್ತೊಂದೆಡೆ ಹಾಸನದಲ್ಲಿರುವ ರೇವಣ್ಣ ಅವರ ನಿವಾಸಕ್ಕೂ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದೆ.
    ರೇವಣ್ಣ ಬಂಧನಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ, ಹಾಸನ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿಯೂ ಪ್ರತಿಭಟನೆಗಳಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts