More

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ ರೇವಣ್ಣ: ಹೀಗಿದೆ ರಾಜಕಾರಣಿಯ ಸೆರೆವಾಸ..

    ಬೆಂಗಳೂರು: ಕೆ.ಆರ್.ನಗರದ ಮಹಿಳೆಯೊಬ್ಬರ ಕಿಡ್ನ್ಯಾಪ್ ಪ್ರಕರಣದಲ್ಲಿ ಬುಧವಾರ(ಮೇ 8) ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್​.ಡಿ.ರೇವಣ್ಣ ಒಂದು ರಾತ್ರಿ ಕಳೆದಿದ್ದಾರೆ. ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಇದೀಗ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ಸೆರೆವಾಸ ಅನುಭವಿಸುತ್ತಿದ್ದಾರೆ.

    ಇದನ್ನೂ ಓದಿ: ಮುರಾರ್ಜಿ ದೇಸಾಯಿ ಹಾಸ್ಟೆಲ್‌ನಲ್ಲಿಯೇ ಓದಿ ರಾಜ್ಯದಲ್ಲಿ ಮೂರನೇ ಟಾಪರ್ ಆದ ರೈತನ ಮಗ: ಮಂಡ್ಯದ ಕನ್ನಲಿ ಗ್ರಾಮದ ನವನೀತ್ ವಿದ್ಯಾರ್ಥಿಗಳಿಗೆ ಮಾದರಿ..!

    ರಾಜಕಾರಣಿಯಾಗಿ, ಶಾಸಕರಾಗಿ ರಾಜನಂತೆ ಜೀವನ ನಡೆಸಿದ್ದ ರೇವಣ್ಣ ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ 1 ರಾತ್ರಿ ಏಕಾಂತದಲ್ಲಿ ಪೆಚ್ಚುಮೋರೆ ಹಾಕಿಕೊಂಡು ಕಾಲ ಕಳೆದಿದ್ದಾರೆ. ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬಾರ್ ಅನ್ನು ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆಯನ್ನು ಪಡೆದಿದ್ದಾರೆ.

    ರೇವಣ್ಣ ರಾತ್ರಿ ತಡವಾಗಿ ಊಟ ಮಾಡಿದ್ದು, ಮೌನಕ್ಕೆ ಜಾರಿದ್ದಾರೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಕುಳಿತಲ್ಲೇ ಯೋಚಿಸುತ್ತಿದ್ದರು. ಬಳಿಕ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಇನ್ನು ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ನಿನ್ನೆ ರಾತ್ರಿ ಜೈಲಾಧಿಕಾರಿಗಳು ಅವರ ಮೇಲೆ ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಗುರುವಾರ ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ.

    ಬುಧವಾರ ಸಂಜೆ 4.30ರ ಗಂಟೆಗೆ ಸೆಂಟ್ರಲ್​ ಜೈಲಿನ ಮುಖ್ಯ ದ್ವಾರದ ಮೂಲಕ ರೇವಣ್ಣ ಜೈಲಿನ ಒಳಗೆ ಪ್ರವೇಶಿಸಿದ್ದರು. ಜೈಲಿನ ಒಳಗೆ ಹೋದ ರೇವಣ್ಣಗೆ ಮೊದಲು ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಲಾಯಿತು. ವಿಚಾರಣಾಧೀನ ಕೈದಿ ನಂಬರ್‌ 4567 ನಂಬರ್‌ ನೀಡಿ ವಿಐಪಿ ಸೆಲ್‌ನಲ್ಲಿ ಇರಿಸಲಾಯಿತು.

    ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯೊಬ್ಬರ ಅಪಹರಣ ಪ್ರಕರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿತ್ತು. ಕಸ್ಟಡಿ ಅವಧಿ ಅಂತ್ಯವಾದ ಬಳಿಕ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.

    ಪಾರದರ್ಶಕ ಟಾಪ್‌, ಸಣ್ಣ ಸ್ಕರ್ಟ್ ತೊಟ್ಟು ಯುವಕರ ನಿದ್ದೆಗೆಡಿಸಿದ ಜಾಹ್ನವಿ.. ಅಪ್ಸರೆಯಂತೆ ಕಂಡ ಶ್ರೀದೇವಿ ಪುತ್ರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts