ನೀವು ಈ ನಿರ್ಣಯ ಮಾಡಿಲ್ಲ ಅಂದ್ರೆ ಇಲ್ಲೇ ಪಂಚೆ ಹಾಸಿ ಮಲಗುತ್ತೇವೆ: ರೇವಣ್ಣ

HD revanna
Published on

ಬೆಂಗಳೂರು: ಇದೀಗ ನಡೆಯುತ್ತಿರುವ ಕಲಾಪದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ನಿರ್ಣಯ ಮಾಡುವ ವಿಚಾರ ಮುನ್ನೆಲೆಗೆ ಬಂದಿತ್ತು. ಈ ಸಂದರ್ಭದಲ್ಲಿ ಎಚ್.ಡಿ ರೇವಣ್ಣ, ಬೆಂಬಲ ಬೆಲೆ ನಿರ್ಣಯ ಮಾಡದೇ ಇದ್ದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್​ ಶಾಸಕ ಎಚ್​.ಡಿ. ರೇವಣ್ಣ, " ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಇವತ್ತೆ ನಿರ್ಧಾರ ಮಾಡಿ. ಇಲ್ಲವಾದಲ್ಲಿ ಇಲ್ಲೇ ಪಂಚೆ ಹಾಸಿಕೊಂಡು ಮಲಗ್ತೇವೆ. ಹೇಗೋ ಸ್ಪೀಕರ್ ರಾತ್ರಿಗೆ ಊಟ ಹಾಕಿಸ್ತಾರೆ. ಇವತ್ತೇ ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಸರ್ಕಾರ ನಿರ್ಣಯ ಮಾಡಬೇಕು. ಇಲ್ಲವಾದಲ್ಲಿ ಸದನದಲ್ಲಿ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ" ಎಂದು ಸದನದಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net