More

    ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ: ನಾಳೆ ಪ್ರಮಾಣ ವಚನ

    ಹೈದರಾಬಾದ್​: ತೆಲಂಗಾಣ ಕಾಂಗ್ರೆಸ್‌ನ ಫೈರ್‌ಬ್ರಾಂಡ್ ನಾಯಕ ರೇವಂತ್ ರೆಡ್ಡಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ಆಂಧ್ರಕ್ಕೆ ಅಪ್ಪಳಿಸಲಿದೆ ಮೈಚಾಂಗ್ ಸೈಕ್ಲೋನ್, 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್; 200ಕ್ಕೂ ಹೆಚ್ಚು ರೈಲುಗಳು, 70 ವಿಮಾನಗಳ ಹಾರಾಟ ರದ್ದು
    ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥರಾಗಿರುವ ರೇವಂತ್ ರೆಡ್ಡಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಫೈರ್​ಬ್ರಾಂಡ್​ ಎಂದೇ ಖ್ಯಾತಿ ಪಡೆದಿದ್ದಾರೆ. ಹೈಕಮಾಂಡ್​ ಒಲವು ಸಹ ಇವರ ಕಡೆ ಇದ್ದು, ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿದೆ.

    ಸೋಮವಾರ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ರೇವಂತ್ ರೆಡ್ಡಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲು ಕಾಂಗ್ರೆಸ್ ನಾಯಕತ್ವ ಸಹಿ ಹಾಕಿದ್ದು, ನಾಳೆ ಅಥವಾ ಮರುದಿನ ರೆಡ್ಡಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    ಹಿರಿಯ ಕಾಂಗ್ರೆಸ್ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಅಥವಾ ಉತ್ತಮ ಖಾತೆಗೆ ಅವಕಾಶ ಕಲ್ಪಿಸಬಹುದು. ರಾಜ್ಯದಲ್ಲಿ ಸರದಿ ಮುಖ್ಯಮಂತ್ರಿ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    ರೇವಂತ್ ರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಬಹುದು ಎಂಬ ಗುಸುಗುಸು ನಡುವೆಯೇ ಉತ್ತಮ್ ರೆಡ್ಡಿ ಅವರು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದರು.

    ರೇವಂತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆಯೇ? ನೀವು ಬಿಆರ್‌ಎಸ್ ಶಾಸಕರನ್ನು ಸಂಪರ್ಕಿಸಿರುವಿರಾ ಎಂದು ಕೇಳಿದಾಗ ಮೌನಕ್ಕೆ ಶರಣಾದರು.

    ಮೂಲತಹಃ ಬಿಜೆಪಿಯ ಎಬಿವಿಪಿಯಿಂದ ಬಂದಿರುವ ರೇವಂತ್​ ರೆಡ್ಡಿ ಮಲ್ಕಾಜ್‌ಗಿರಿಯ ಸಂಸದರಾಗಿದ್ದಾರೆ. 2017 ರಲ್ಲಿ ತೆಲುಗು ದೇಶಂ ಪಕ್ಷದಿಂದ (ಟಿಡಿಪಿ) ಕಾಂಗ್ರೆಸ್‌ಗೆ ಬಂದ ಅವರು ಅಸ್ಥಿತ್ವ ಕಳೆದುಕೊಂಡಿದ್ದ ಕಾಂಗ್ರೆಸ್​ಗೆ ಚೇತರಿಕೆ ಕಾಣುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕೆಸಿಆರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದಿದ್ದರೆ, ಬಿಆರ್‌ಎಸ್ 39 ಸ್ಥಾನಗಳನ್ನು ಗೆದ್ದಿದೆ.

    ದಾಖಲೆ ಸೃಷ್ಟಿಸಿದ ಭಾರತದ ಷೇರುಗಳು – $4 ಟ್ರಿಲಿಯನ್​ಗೆ ಏರಿಕೆ – ಅಮೆರಿಕಾ, ಚೀನಾ, ಜಪಾನ್‌ ಒಳಗೊಂಡ ಎಲೈಟ್ ಕ್ಲಬ್‌ಗೆ ಸೇರ್ಪಡೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts