More

    ರೇವಂತ್ ರೆಡ್ಡಿ ಗುರುವಾರ ತೆಲಂಗಾಣ ಮುಂದಿನ ಮುಖ್ಯಮಂತ್ರಿ- ಗುರುವಾರ ಪ್ರಮಾಣ ವಚನ – ಕಾಂಗ್ರೆಸ್ ಅಧಿಕೃತ ಘೋಷಣೆ

    ನವದೆಹಲಿ: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಮುಂದಿನ ಮುಖ್ಯಮಂತ್ರಿಯಾಗಲಿದ್ದು, ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಂಗಳವಾರ ಸಂಜೆ ತಿಳಿಸಿದರು.

    ಇದನ್ನೂ ಓದಿ: ಸಿದ್ದರಾಮಯ್ಯನವರು ಈಗ ಗರ ಬಡಿದ ಹಾಗೆ ಆಗಿಟ್ಟಿದ್ದಾರೆ : ಆರ್​​. ಅಶೋಕ್​
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನಾಗಲಿದ್ದಾರೆ. ಅವರು ಅನುಭವಿ, ಎಲ್ಲರೊಂದಿಗೆ ಹೊಂದಿಕೊಂಡು ಕೆಲಸ ಮಾಡುತ್ತಾರೆ. ಈಗಾಗಲೇ ತೆಲಂಗಾಣ ಜನರಿಗೆ ಗ್ಯಾರಂಟಿಗಳ ಭರವಸೆ ನೀಡಿದ್ದಾರೆ. ಅವುಗಳನ್ನು ಕಾರ್ಯರೂಪಕ್ಕೆ ತರಲಿದ್ದಾರೆ ಎಂದು ಹೇಳಿದರು.

    ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿ.7 ರಂದು ಗುರುವಾರ ನಡೆಯಲಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಅಥವಾ ಉತ್ತಮ ಖಾತೆಗೆ ಅವಕಾಶ ಕಲ್ಪಿಸಬಹುದು. ರಾಜ್ಯದಲ್ಲಿ ಸರದಿ ಮುಖ್ಯಮಂತ್ರಿ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    ರೇವಂತ್ ರೆಡ್ಡಿ ಮಲ್ಕಾಜ್‌ಗಿರಿಯ ಲೋಕಸಭಾ ಸಂಸದರೂ ಆಗಿದ್ದು, ಎಬಿವಿಪಿ ಮೂಲದವರು. 2017 ರಲ್ಲಿ ತೆಲುಗು ದೇಶಂ ಪಕ್ಷದಿಂದ (ಟಿಡಿಪಿ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ರಾಜ್ಯದಲ್ಲಿ ಬಿಆರ್​ಎಸ್​ ಅನ್ನು ಸೋಲಿಸಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
    ಕೆಸಿಆರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದಿದ್ದರೆ, ಬಿಆರ್‌ಎಸ್ 39 ಸ್ಥಾನಗಳನ್ನು ಗೆದ್ದಿದೆ.

    ಬಾಲಿವುಡ್​ ನಟರೊಂದಿಗೆ ದೀದಿ ಮಸ್ತ್​ ಡ್ಯಾನ್ಸ್​; ವಿಡಿಯೋ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts