More

    ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಇರಲಿ

    ಚಿಕ್ಕಬಳ್ಳಾಪುರ : ಅಧಿಕಾರಿಗಳು ಕರ್ತವ್ಯ ನಿಷ್ಠೆ ಮತ್ತು ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಲಹೆ ನೀಡಿದರು.

    ಜಿಲ್ಲಾಡಳಿತ ಭವನದಲ್ಲಿ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ನೌಕರರ ಸಂಘ ಶನಿವಾರ ಹಮ್ಮಿಕೊಂಡಿದ್ದ ಕಂದಾಯ ದಿನ ಕಾರ್ಯಕ್ರಮ ಉದ್ಘಾಟಿಸಿದರು.

    ಸರ್ಕಾರಿ ಕೆಲಸ ದೇವರ ಕೆಲಸ, ಸೇವೆ ಬಯಸಿ ಕಚೇರಿಗೆ ಬರುವ ಜನರನ್ನು ಅಲೆದಾಡಿಸುವುದು ಸರಿಯಲ್ಲ. ಇದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದರು.

    ವಿವಿಧ ಇಲಾಖೆಗಳಿಗೆ ಕಂದಾಯ ಮಾತೃ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದೆ. ಹೆಚ್ಚಿನ ಕೆಲಸದ ಒತ್ತಡದಲ್ಲೂ ಚುನಾವಣೆ, ಶಿಷ್ಟಾಚಾರ ಪಾಲನೆ, ಜನರಿಗೆ ಉತ್ತಮ ಸೇವೆ ನೀಡುವುದರಲ್ಲಿ ಒಳ್ಳೆಯ ಹೆಸರು ಪಡೆದಿದೆ. ಇದನ್ನು ಪ್ರತಿಯೊಬ್ಬರು ಪರಸ್ಪರ ಸಹಕಾರದಿಂದ ಉಳಿಸಿಕೊಂಡು ಹೋಗಬೇಕು ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಸಲಹೆ ನೀಡಿದರು.

    ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ವೈ.ಎಲ್.ಹನುಮಂತರಾಯ ಮತ್ತಿತರರು ಇದ್ದರು.

    ಬಹುಮಾನ ವಿತರಣೆ : ಸಕಾಲ ಯೋಜನೆಯ ಅನುಷ್ಠಾನದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಚಿಕ್ಕಬಳ್ಳಾಪುರ ತಹಸೀಲ್ದಾರ್ ಕೆ.ನರಸಿಂಹಮೂರ್ತಿ ಮತ್ತು ದ್ವಿತೀಯ ಸ್ಥಾನ ಪಡೆದ ಗುಡಿಬಂಡೆ ತಹಸೀಲ್ದಾರ್ ಹನುಮಂತರಾಯ ಅವರನ್ನು ಸನ್ಮಾನಿಸಲಾಯಿತು. ಕಂದಾಯ ಇಲಾಖೆಯ ಕ್ರೀಡಾಕೂಟದಲ್ಲಿ ಚಿಂತಾಮಣಿ ತಾಲೂಕಿನ ಗೋಪಾಲಕೃಷ್ಣ ತಂಡಕ್ಕೆ ಪ್ರಥಮ, ಶಿಡ್ಲಘಟ್ಟ ತಾಲೂಕಿನ ರವಿಚಂದ್ರ ತಂಡಕ್ಕೆ ದ್ವಿತೀಯ ಬಹುಮಾನ, ಮಹಿಳಾ ಥ್ರೋಬಾಲ್ ಸ್ಪರ್ಧೆಯಲ್ಲಿ ಗೆದ್ದ ಚಿಂತಾಮಣಿ ತಂಡಕ್ಕೆ ಪ್ರಥಮ ಹಾಗೂ ಗೌರಿಬಿದನೂರು ತಂಡಕ್ಕೆ ದ್ವಿತೀಯ ಬಹುಮಾನ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts