More

    ಕಂದಾಯ ಇಲಾಖೆಯಲ್ಲಿ ಮಹತ್ವದ ಸುಧಾರಣೆ*ಭೂ ಸುರಕ್ಷಾ ಯೋಜನೆ ಜಾರಿಗೆ*ಆಕಾರ್‌ಬಂದ್‌ಗಳ ಗಣಕೀಕರಣ*ಪೋಡಿ ಮುಕ್ತ ಅಭಿಯಾನ*ಡ್ರೋಣ್ ಮೂಲಕ ಸರ್ವೆಗೆ ಕ್ರಮ; ತಾಂಡದ 2ಲಕ್ಷ ನಿವಾಸಿಗಳಿಗೆ ಹಕ್ಕುಪತ್ರ

    ಬೆಂಗಳೂರು:
    ಕಂದಾಯ ಇಲಾಖೆಯಲ್ಲಿ ಮಹತ್ವದ ಸುಧಾರಣೆ ಕ್ರಮಗಳನ್ನು ೋಷಿಸಿರುವ ಸಿಎಂ ಸಿದ್ದರಾಮಯ್ಯ, ಭೂ ಸುರಕ್ಷಾ ಯೋಜನೆ ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ.
    ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್ಲೈನ್ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಮುಖ ಅಂಶಗಳು ಇಲ್ಲಿವೆ.

    *ಆಕಾರ್‌ಬಂದ್ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್‌ಬಂದ್‌ಗಳ ಗಣಕೀಕರಣ ಕಾರ್ಯ

    *ಬಹು ಮಾಲೀಕತ್ವವುಳ್ಳ ಪಹಣಿಗಳನ್ನು ಅಳತೆಗೆ ಒಳಪಡಿಸುವ ಮೂಲಕ ಪ್ರತಿ ಹಿಡುವಳಿದಾರರಿಗೆ ಪೋಡಿ ಮಾಡಿ ಪ್ರತ್ಯೇಕ ಆರ್.ಟಿ.ಸಿ.ಯನ್ನು ವಿತರಿಸುವ ಅಭಿಯಾನ ಮುಂದುವರಿಕೆ, ಬಾಕಿ ಉಳಿದಿರುವ ಗ್ರಾಮಗಳನ್ನು ಪೋಡಿ ಅಭಿಯಾನ 2.0 ರಡಿ ಪೋಡಿ ಮುಕ್ತ ಮಾಡಲು ಆದ್ಯತೆ

    *ದರಖಾಸ್ತು ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಯಾವುದೇ ತಕರಾರು ಇಲ್ಲದೆ ಇರುವ ಜಮೀನುಗಳಿಗೆ ಸರ್ಕಾರದಿಂದ ಸ್ವಯಂ ಪ್ರೇರಿತವಾಗಿ 1 ರಿಂದ 5 ರ ವರೆಗಿನ ದಾಖಲೆಗಳನ್ನು ಸಿದ್ಧಪಡಿಸಲು ಕ್ರಮ

    *30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆ ವಿಸ್ತರಣೆ

    *ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ನೋಟೀಸುರಹಿತ ಮ್ಯುಟೇಷನ್‌ಗಳು (ಪೌತಿ ಖಾತೆ ಮತ್ತು ಜೆ-ಸ್ಲಿಪ್ ಮುಖಾಂತರ ಆಗುವ ಮ್ಯುಟೇಷನ್ಗಳನ್ನು ಹೊರತುಪಡಿಸಿ) ನಿಗದಿತ ತಂತ್ರಾಂಶದಲ್ಲಿ ಸ್ವಯಂ-ಚಾಲಿತವಾಗಿ ಅನುಮೋದನೆಯಾಗುವಂತೆ ಕ್ರಮ.

    *ಆಧುನಿಕ ಉಪಕರಣಗಳ ಮುಖಾಂತರ ಕಡಿಮೆ ಅವಧಿಯಲ್ಲಿ ಭೂಮಾಪನ ಕಾರ್ಯಗಳನ್ನು ಕೈಗೊಂಡು ನಿಖರವಾದ ಡಿಜಿಟಲ್ ದಾಖಲೆಗಳನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ನೀಡಲು ಅಗತ್ಯವಾದ ಡ್ರೋನ್ ಮತ್ತಿತರ ಉಪಕರಣಗಳು ಜಿಲ್ಲಾ ಭೂಮಾಪನಾ ಕಚೇರಿಗೆ ಒದಗಿಸಲು ಕ್ರಮ

    • ಡಿಜಿ ಕಂದಾಯ ಯೋಜನೆಯಡಿ ಕಂದಾಯ ಇಲಾಖೆಯು ನೀಡುವ ಎಲ್ಲಾ ಸೇವೆಗಳನ್ನು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಡಿಜಿಟಲ್ ಪ್ಲಾಟ್ ಾರಂ ಮೂಲಕ ಸಾರ್ವಜನಿಕರಿಗೆ ಒದಗಿಸಲು ಕ್ರಮ. ಇ-ಆಫೀಸ್ ವ್ಯವಸ್ಥೆ ಗ್ರಾಮಮಟ್ಟದವರೆಗೆ ವಿಸ್ತರಣೆ. ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರಿಗೆ ಲ್ಯಾಪ್‌ಟಾಪ್.

    *ಸರ್ಕಾರವು ದಾಖಲೆ ರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿಯ ಸುಮಾರು 2 ಲಕ್ಷ ನಿವಾಸಿಗಳಿಗೆ ಹಕ್ಕು ಪತ್ರ

    *ಭೂ-ಮಾಪನ ಇಲಾಖೆಗೆ ಸೇರಿದ 240 ಅಭಿಲೇಖಾಲಯ ಕೊಠಡಿಗಳ ಆಧುನೀಕರಣ

    *ಭೂಮಿ ತಂತ್ರಾಂಶದಲ್ಲಿ ಫ್ಲಾಗ್ ಮಾಡಲಾಗಿರುವ ಸರ್ಕಾರಿ ಜಮೀನಿನ ಪಹಣಿಗಳನ್ನು ಲ್ಯಾಂಡ್ ಬೀಟ್ ಆಪ್ ಬಳಸಿ, ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರ ಸರ್ಕಾರಿ ಜಮೀನಿನ ಒತ್ತುವರಿ ಹಾಗೂ ಸಂರಕ್ಷಣೆಗೆ ನಿಗಾ

    *42 ತಾಲ್ಲೂಕು ಆಡಳಿತ ಸೌಧದ ಕಾಮಗಾರಿಗಳಿಗೆ 80 ಕೋಟಿ ರೂ. ಹಾಗೂ 14 ಜಿಲ್ಲಾಡಳಿತ ಸೌಧದ ಕಾಮಗಾರಿಗಳಿಗೆ 50 ಕೋಟಿ ರೂ.

    *ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪರಿಣಾಮದ ದೃಶ್ಯಗಳು ಮತ್ತು ಹವಾಮಾನ ಬದಲಾವಣೆ ಪರಿಹಾರಗಳ ಕುರಿತು ಅರಿವು ಮೂಡಿಸಲು ಹವಾಮಾನ ಬದಲಾವಣೆ ಅನುಭವ ಕೇಂದ್ರ ಪ್ರಾರಂಭಕ್ಕೆ 10 ಕೋಟಿ ರೂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts