More

    ನಾಳೆ ಈ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಯಾವ ಕೆಲಸವೂ ಆಗಲ್ಲ; ನೌಕರರಿಂದ ರಾಜಕೀಯ ಪಕ್ಷದ ವಿರುದ್ಧ ಹೋರಾಟ

    ಬೆಂಗಳೂರು: ನಾಳೆ ರಾಜ್ಯದ ಜಿಲ್ಲೆಯೊಂದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿತ ಯಾವುದೇ ಕೆಲಸವೂ ಆಗುವುದಿಲ್ಲ. ಏಕೆಂದರೆ ರಾಜಕೀಯ ಪಕ್ಷವೊಂದರ ವಿರುದ್ಧ ಈ ಇಲಾಖೆಯ ನೌಕರರು ರೊಚ್ಚಿಗೆದ್ದಿದ್ದು, ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.

    ಮಂಡ್ಯ ಜಿಲ್ಲೆಯ ಪಾಂಡವಪುರ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಸೇರಿ 15 ಜನ ನೌಕರರ ಮೇಲೆ ಎಫ್​ಐಆರ್​ ದಾಖಲಾಗಿರುವುದರಿಂದ ನೌಕರರು ಈ ಪ್ರತಿಭಟನೆಗೆ ಮುಂದಾಗಿದ್ದಾರೆ. ದೂರನ್ನು ಹಿಂಪಡೆಯುವಂತೆ ಆಗ್ರಹಿಸಿ ಅವರು ಈ ಪ್ರತಿಭಟನೆ ಕೈಗೊಂಡಿದ್ದಾರೆ.

    ಇದನ್ನೂ ಓದಿ: ರಸ್ತೆ ಗುಂಡಿಗೆ ಶಿಕ್ಷಕಿ ಬಲಿ: ಹೊಂಡದಿಂದಾಗಿ ಆಯತಪ್ಪಿ ಬಿದ್ದಾಕೆ ಮೇಲೆ ಚಲಿಸಿದ ಬೊಲೆರೊ ವಾಹನ

    ಕೆಆರ್​ಎಸ್​ ಪಕ್ಷದ ಕಾರ್ಯಕರ್ತರು ಕಂದಾಯ ಇಲಾಖಾ ಅಧಿಕಾರಿ ಹಾಗೂ ನೌಕರರ ವಿರುದ್ಧ ನೀಡಿದ ದೂರಿನ ಮೇರೆಗೆ ಈ ಎಫ್​ಐಆರ್​ ದಾಖಲಾಗಿದೆ. ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸುಳ್ಳು ದೂರು ದಾಖಲಿಸಿದ್ದಾರೆ ಎಂಬುದು ನೌಕರರ ಆರೋಪ. ಅಲ್ಲದೆ ಕೆಆರ್​ಎಸ್​ ಪಕ್ಷದ ಕಾರ್ಯಕರ್ತರು ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದು, ಕಂದಾಯ ಇಲಾಖೆ ನೌಕರರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ‌ ಇರುವುದರಿಂದ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ನಾಳೆ ಸಂಜೆಯೊಳಗೆ ದೂರನ್ನು ವಾಪಸ್ ಪಡೆಯದಿದ್ದರೆ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ಮಂಡ್ಯ ಜಿಲ್ಲಾದ್ಯಕ್ಷ ತಮ್ಮಣ್ಣಗೌಡ ತಿಳಿಸಿದ್ದಾರೆ.

    ಬೀದಿನಾಯಿ ಮೇಲೆ ಶ್ರೀಮಂತಿಕೆಯ ದರ್ಪ?: ಮಲಗಿದ್ದ ನಾಯಿ ಮೇಲೆ ಆಡಿ ಕಾರು ಹತ್ತಿಸಿಕೊಂಡು ಹೋದ ಭೂಪ..

    ಭ್ರಷ್ಟಾಚಾರ ಆರೋಪದಲ್ಲಿ ಸಿಕ್ಕಿಬಿದ್ದ ತಹಸೀಲ್ದಾರ್​; ಆತ್ಮಹತ್ಯೆ ಮಾಡಿಕೊಂಡ ಚಾಲಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts