More

    ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಿ ಕೋರಿದ ಕಂದಾಯ ಸಚಿವ ಅಶೋಕ್!

    ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ವಿಮುಕ್ತಿ ನೀಡುವಂತೆ ಸಿಎಂ ಬೊಮ್ಮಾಯಿ‌ಗೆ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ. ಇತರೆ ಅನೇಕ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಜವಾಬ್ದಾರಿಗಳೂ ಇರುವುದರಿಂದ ಎಲ್ಲದನ್ನೂ ನಿರವಹಿಸಲು ಸಾಧ್ಯವಾಗದ ಕಾರಣ ಮಂಡ್ಯದ ಉಸ್ತುವಾರಿಯಿಂದ ವಿಮುಕ್ತಿ ನೀಡಿ ಎಂದು ಕಂದಾಯ ಸಚಿವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.

    26ನೇ ಜನವರಿ 2023ರ ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನನ್ನನ್ನು ನೇಮಿಸಿದ್ದ ಸಂದರ್ಭದಲ್ಲಿ ಆರ್​ ಅಶೋಕ್​ರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. ಕಂದಾಯ ಇಲಾಖೆ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಕಂದಾಯ ಸಚಿವರು ಆ ಗ್ರಾಮಗಳಲ್ಲಿ ವಾಸ್ತವ್ಯ ಹೂಡಬೇಕಿದೆ.ಇನ್ನೂ ಕನಿಷ್ಠ 2-3 ಜಿಲ್ಲೆಗಳಲ್ಲಿ ಅವರು ಗ್ರಾಮ ವಾಸ್ತವ್ಯ ಮಾಡಬೇಕಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

    ವಿಧಾನಸೌಧದ ಹೊರ ಆವರಣದ ಪೂರ್ವದಿಕ್ಕಿನ ಜಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ಸ್ಥಾಪಿಸಲು ರಚಿಸಿರುವ ಉಸ್ತುವಾರಿ ಸಮಿತಿಗೆ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, 30 ದಿನಗಳಲ್ಲಿ ಕೆಲಸ ಪೂರ್ಣಗೊಳಿಸಿ ಪುತ್ಥಳಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಬೇಕಾಗಿದೆ.

    14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಗೂ ಆರ್​ ಅಶೋಕ್​ರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದು ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅವರು ಯಶಸ್ವಿಯಾಗಿ ನಡೆಸಬೇಕಾಗಿದೆ.

    ಇವೆಲ್ಲವೂ ಸರ್ಕಾರದ ಪ್ರಮುಖ ಜನಪ್ರಿಯ ಕಾರ್ಯಕ್ರಮಗಳಾಗಿರುವ ಕಾರಣ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ನಿರ್ವಹಿಸಲು ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದಿರುವ ಸಚಿವರು ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಜವಾಬ್ದಾರಿಯಿಂದ ಅವರನ್ನು ವಿಮುಕ್ತಿಗೊಳಿಸಬೇಕೆಂದು ಕೋರಿದ್ದಾರೆ.

    ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಿ ಕೋರಿದ ಕಂದಾಯ ಸಚಿವ ಅಶೋಕ್!

    ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಿ ಕೋರಿದ ಕಂದಾಯ ಸಚಿವ ಅಶೋಕ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts