More

    ಭೂ ಪರಿವರ್ತನೆಗೆ ಲಂಚ ಪಡೆದ ಕಂದಾಯ ಅಧಿಕಾರಿ ಎಸಿಬಿ ಬಲೆಗೆ

    ಕುಂದಾಪುರ: ಭೂ ಪರಿವರ್ತನೆಗೆ (ಕನ್ವರ್ಶನ್) 12 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಗುರುವಾರ 5 ಸಾವಿರ ರೂ. ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಸಿಲುಕಿದ್ದಾರೆ.

    ಕುಂದಾಪುರದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದು, ಪ್ರಸ್ತುತ ಕಂದಾಯ ನಿರೀಕ್ಷಕರಾಗಿರುವ ಭರತ್ ವಿ. ಶೆಟ್ಟಿ ಲಂಚ ಪಡೆಯುವಾಗ ತಮ್ಮ ಕಚೇರಿಯಲ್ಲಿಯೇ ಎಸಿಬಿ ತಂಡಕ್ಕೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

    ಭೂಪರಿವರ್ತೆನೆಗೆ ವ್ಯಕ್ತಿಯೊಬ್ಬರ ಬಳಿ 12 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಈ ಬಗ್ಗೆ ಆತ ಎಸಿಬಿಗೆ ದೂರು ನೀಡಿದ್ದರು. ಅದರಂತೆ ಎಸಿಬಿ ಕಾರ್ಯಾಚರಣೆ ನಡೆಸಿದ್ದು, ಗುರುವಾರ ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಸದ್ಯ ವಿಚಾರಣೆ ನಡೆಯುತ್ತಿದ್ದು ಸಂಜೆ ವೇಳೆ ಭರತ್ ಶೆಟ್ಟಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

    ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ ಕವರಿ, ಇನ್‌ಸ್ಪೆಕ್ಟರ್ ಸತೀಶ್ ಬಿ.ಎಸ್., ಚಂದ್ರಕಲಾ, ಎಸಿಬಿ ಸಿಬ್ಬಂದಿ ಯತಿನ್ ಕುಮಾರ್, ಪ್ರಸನ್ನ, ರವೀಂದ್ರ ಗಾಣಿಗ, ಅಬ್ದುಲ್ ಜಲಲ್, ರಾಘವೇಂದ್ರ ಹೊಸ್ಕೋಟೆ, ಸೂರಜ್, ಅಬ್ದುಲ್ ಲತೀಫ್, ಪ್ರತಿಮಾ ಕಾರ್ಯಾಚರಣೆ ನಡೆಸಿದ ತಂಡದಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts